ಸಂಗ್ರಹ ಚಿತ್ರ 
ದೇಶ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಏಪ್ರಿಲ್ 13ರವರೆಗೂ ಪೀಟರ್ ಮುಖರ್ಜಿಗೆ ನ್ಯಾಯಾಂಗ ಬಂಧನ

ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ದೆಹಲಿಯ ಪಾಟಿಯಾಲಾ ಕೋರ್ಟ್ ಈ ಸಂಬಂಧ ಆದೇಶ ನೀಡಿದ್ದು, ಆರೋಪಿ ಪೀಟರ್ ಮುಖರ್ಜಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದರು ಎಂದು ತಿಳಿದುಬಂದಿದೆ.
ಪೀಟರ್ ಮುಖರ್ಜಿ ಐಎನ್ ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಮಾಜಿ ಸಹ ನಿರ್ದೇಶಕರಾಗಿದ್ದು, ಕಿಕ್ ಬ್ಯಾಕ್ ನೀಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಬಿಐ ಇವರ ವಿರುದ್ಧ ತನಿಖೆ ನಡೆಸುತ್ತಿದೆ. ಮೂಲಗಳ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪೀಟರ್ ಮುಖರ್ಜಿ ವಿಚಾರಣೆಗೆ ಸಹಕಿರಿಸುತ್ತಿಲ್ಲ ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹೇಳಿದ್ದು, ಇದೇ ಕಾರಣಕ್ಕೆ ಕಾರ್ತಿ ಚಿದಂಬಂರಂ ವಿರುದ್ಧ ಆರೋಪಗಳನ್ನು ಸಾಬೀತು ಪಡಿಸಲು ಸಾಧ್ಯವಾಗಿಲ್ಲ ಎಂದು ಸಿಬಿಐ ನ್ಯಾಯಾಧೀಶರ ಮುಂದೆ ಹೇಳಿದೆ.
ಈಗಾಗಲೇ ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಪೀಟರ್ ಮುಖರ್ಜಿ, ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲೂ ಪ್ರಮುಖ ಆರೋಪಿಯಾಗಿದ್ದಾರೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಕಾರ್ತಿ ಚಿದಂಬರಂ ಅವರಿಗೆ ಪೀಟರ್ ಸುಮಾರು 3.5 ಕೋಟಿ ರೂ ಕಿಕ್ ಬ್ಯಾಕ್ ನೀಡಿದ ಆರೋಪ ಎದುರಿಸುತ್ತಿದ್ದಾರೆ. 2007ರಲ್ಲಿ 9ಎಕ್ಸ್ ಮೀಡಿಯಾ ಲಂಚ ಪ್ರಕರಣ ಸಂಬಂಧ ದೂರು ದಾಖಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ