ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಕೆ ಸ್ಟಾಲಿನ್
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿರುವ ಡಿಎಂಕೆ ಪಕ್ಷ ಇದೇ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ.
ಇಂದು ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆದಿದ್ದು, ಸುಮಾರು ಒಂದು ಗಂಟೆಗೂ ಅಧಿಕ ಸಮಯ ನಡೆದ ಸಭೆಯಲ್ಲಿ ಕಾವೇರಿ ವಿಚಾರವಾಗಿ ಚರ್ಚೆ ನಡೆಸಲಾಯಿತು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ಇದೇ ಏಪ್ರಿಲ್ 5ರಂದು ತಮಿಳುನಾಡಿನಾದ್ಯಂತ ಬಂದ್ ಘೋಷಣೆ ಮಾಡಲಾಗಿದೆ.
ನಾವು ಕರೆ ನೀಡಿರುವ ಬಂದ್ ಗೆ ಆಡಳಿತಾ ರೂಢ ಎಐಎಡಿಎಂಕೆ ಪಕ್ಷ ಕೂಡ ಬೆಂಬಲ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ನಮ್ಮ ಪ್ರತಿಭಟನೆ ವ್ಯಕ್ತಪಜಿಸಲಾಗುತ್ತದೆ. ತಮಿಳುನಾಡಿಗೆ ಯಾವುದೇ ಕೇಂದ್ರ ಸಚಿವರು ಭೇಟಿ ನೀಡಿದರೂ ಅವರಿಗೆ ನಮ್ಮ ಪಕ್ಷದ ಕಾರ್ಯಕರ್ತ ಕಪ್ಪು ಬಾವುಟ ಪ್ರದರ್ಶನ ಮಾಡಲಿದ್ದಾರೆ ಎಂದು ಸ್ಟಾಲಿನ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics