ಇಂದೋರ್; ಇಂದೋರ್ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಸಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಚೌಹಾಣ್ ಅವರು, ಮೃತರ ಕುಟುಂಬಕ್ಕೆ ರೂ. 2 ಲಕ್ಷ ಹಾಗೂ ಗಾಯಾಗಳುಗಳಿಗೆ ರೂ. 50,000 ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ಬೆಳಿಗ್ಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ದುರಂತವೊಂದು ಸಂಭವಿಸಿತ್ತು. ವೇಗವಾಗಿ ಬಂದ ಕಾರೊಂದು ಕಟ್ಟಡಕ್ಕೆ ಡಿಕ್ಕೆ ಹೊಡೆದ ಪರಿಣಾಮ 4 ಅಂತಸ್ತಿನ ಹಳೆಯ ಕಟ್ಟಡ ಕುಸಿದುಬಿದ್ದು 10 ಮಂದಿ ದುರ್ಮರಣವನ್ನಪ್ಪಿದ್ದರು.