ಅನಂತ್ ನಾಗ್; ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಮತ್ತೋರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ ಎಂದು ಭಾನುವಾರ ತಿಳಿದುಬಂದಿದೆ ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯ ದಿಯಾಲ್ಗಾಮ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಎನ್ ಕೌಂಟರ್ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ದಿಯಾಲ್ಗಾಮ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದಿವೆ. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಬಳಿಕ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾ ಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಕೆಲ ದಿನಗಳ ಹಿಂದಷ್ಟೇ ಹೊಸದಾಗಿ ಉಗ್ರರೊಂದಿಗೆ ಕೈಜೋಡಿಸಿದ್ದ ಮತ್ತೋರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್'ಕೌಂಟರ್ ಬೆನ್ನಲ್ಲೇ ಶೋಪಿಯಾನ್ ಜಿಲ್ಲೆಯ ಕಚ್ದೂರ ಎಂಬ ಪ್ರದೇಶದಲ್ಲಿಯೂ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸುತ್ತಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics