ಸಚಿನ್ ಪೈಲೆಟ್ 
ದೇಶ

ರಾಜಸ್ಥಾನ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಆಂತರಿಕ ಕಲಹ ನಡೆಯುತ್ತಿಲ್ಲ: ಸಚಿನ್ ಪೈಲೆಟ್

ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ನಾಯಕರ ನಡುವೆ ಯಾವುದೇ ಆಂತರಿಕ ಕಲಹ....

ಜೈಪುರ: ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ನಾಯಕರ ನಡುವೆ ಯಾವುದೇ ಆಂತರಿಕ ಕಲಹ ನಡೆಯುತ್ತಿಲ್ಲ ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲೆಟ್ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಆಂತರಿಕ ಕಲಹ ನಡೆಯುತ್ತಿದೆ ಎಂಬುದು ಕೇವಲ ವದಂತಿ. ನಮ್ಮ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಸಚಿನ್ ಪೈಲೆಟ್ ಹೇಳಿದ್ದಾರೆ.
ನಾವು ಎಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿನ್ ಪೈಲೆಟ್ ಅವರು ಐಎಎನ್ಎಸ್ ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಈ ವರ್ಷಾಂತ್ಯಕ್ಕೆ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಯಾರೂ ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಸಚಿನ್ ಪೈಲೆಟ್ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಮಧ್ಯ ಆಂತರಿಕ ಕಲಹ ನಡೆಯುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಈ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಗೆಹ್ಲೋಟ್ ಅವರನ್ನು ಎಐಎಸಿಸಿ ತರಬೇತಿ ಮತ್ತು ಸಂಘಟನೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಇದರ ಬೆನ್ನಲ್ಲೇ ಗೆಹ್ಲೋಟ್ ಅವರು ದಿನ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯುವ ನಾಯಕರು ಕ್ಯೂನಲ್ಲಿ ಕಾಯುವುದನ್ನು ಕಲಿಬೇಕು. ಜಂಪ್ ಮಾಡಲು ಯತ್ನಿಸಬಾರದು ಎಂದು ಹೇಳಿರುವುದು ಆಂತರಿಕ ಕಲಹಕ್ಕೆ ಪುಷ್ಟಿ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video