ನವದೆಹಲಿ : ಮಧ್ಯಪ್ರದೇಶದ ಉಜ್ಜೈನಿ ಮಹಾಕಾಳಿ ದೇವಾಲಯದ ಆಚರಣೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನ್ಯಾಯಾಧೀಶ ವಿ. ರಾಮಣ್ಣ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ನೀಡಿರುವ ಮಧ್ಯಂತರ ಆದೇಶದಲ್ಲಿ ಈ ತೀರ್ಪು ನೀಡಲಾಗಿದೆ.ಆದಾಗ್ಯೂ, ಮುಂದಿನ ವರ್ಷದ ಜನವರಿ ತಿಂಗಳಲ್ಲಿ ದೇವಾಲಯ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಆದೇಶಿಸಿದೆ.
ಶಿವಲಿಂಗ ವಿಚಾರವಾಗಿ ಉಜ್ಜೈನಿ ವಿದ್ವತ್ ಪರಿಷದ್ ನ ಚಿಂತಕರ ವಲಯ ಚರ್ಚೆ ಹುಟ್ಟುಹಾಕಿತ್ತು, ವಿಪರೀತ ಪ್ರಮಾಣದಲ್ಲಿ ಹಾಲು, ಮೊಸರು, ತುಪ್ಪ, ಸಕ್ಕರೆ, ತುಪ್ಪ ಹಾಕಿ ಶಿವಲಿಂಗ ಅಭಿಷೇಕ ಮಾಡುವುದರಿಂದ ಅದು ಕುಗ್ಗಿದೆ ಎಂದು ಅಭಿಪ್ರಾಯಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದ್ದು, ಕೆಲ ನಿಯಮಗಳನ್ನು ಜಾರಿಗೊಳಿಸಿದೆ.
ಈ ಸಮಿತಿ ಇತ್ತೀಚಿಗೆ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ , ಶಿವಲಿಂಗ ರಕ್ಷಿಸಲು ಕೆಲ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಬೇಕೆಂದು ಶಿಫಾರಸ್ಸು ಮಾಡಿತ್ತು.