ಜಮ್ಮು-ಕಾಶ್ಮೀರ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್ ನಲ್ಲಿ ಶಾಲಾ ಬಸ್ ಮೇಲೆ ಕಲ್ಲು ತೂರಾಟ ಘಟನೆಗೆ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ದಿಗ್ಬ್ರಮೆ ವ್ಯಕ್ತಪಡಿಸಿದ್ದು, ಪ್ರಜ್ಞಾಶೂನ್ಯದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶಾಲಾ ಮಕ್ಕಳು ಹಾಗೂ ಪ್ರವಾಸಿಗರ ಬಸ್ ಮೇಲೆ ಹೇಗೆ ಕಲ್ಲು ತೂರಾಟ ನಡೆಸಲಾಗುತ್ತದೆ. ಇಂತಹ ದಾಳಿಗಳು ಏಕತೆಗೆ ಭಂಗ ತರುವಂತಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಒಮಾರ್ ಅಬ್ದುಲ್ಲಾ ಹೇಳಿದ್ದಾರೆ.
ಶಾಲಾ ಮಕ್ಕಳ ಮೇಲೆ ಕಲ್ಲುತೂರಾಟ ಕೃತ್ಯ ಬುದ್ದಿಹೀನವಾಗಿದ್ದು, ಅಪರಾಧಿಗಳನ್ನು ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಮ್ಮು-ಕಾಶ್ಮೀರ ಪೊಲೀಸ್ ವರಿಷ್ಠಾಧಿಕಾರಿ ಎಸ್. ಪಿ. ವಯಿದ್ ಹೇಳಿದ್ದಾರೆ.
ರಾಜಕೀಯ ಭಿನ್ನಭಿಪ್ರಾಯದಿಂದ ಹಿಂಸೆಯ ವಾತಾವಾರಣವನ್ನು ಸೃಷ್ಟಿಸುವುದನ್ನು ಖಂಡಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ವಕ್ತಾರ ಜುನೈದ್ ಮಟ್ ಹೇಳಿದ್ದು, ಈ ಘಟನೆಯನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಉಗ್ರ ಚಟುವಟಿಕೆ ಹೆಚ್ಚಾಗಿರುವ ಶೂಪಿಯನ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಒಂದನೇ ತರಗತಿಯ ಇಬ್ಬರು ಬಾಲಕರ ತಲೆಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.