ಆಂಧ್ರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಆತ್ಮಹತ್ಯೆ 
ದೇಶ

ಆಂಧ್ರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಆತ್ಮಹತ್ಯೆ

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಾ ಎಸಗಿದ ಆರೋಪ ಹೊತ್ತಿದ್ದ ಆಟೋ ರಿಕ್ಷಾ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶ ಗುಂಟುರಿನ ರಾಚಿಪಲ್ಲಿಯಲ್ಲಿ ನಡೆದಿದೆ.

ಗುಂಟೂಯ್ರು(ಆಂಧ್ರ ಪ್ರದೇಶ): 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಾ ಎಸಗಿದ ಆರೋಪ ಹೊತ್ತಿದ್ದ ಆಟೋ ರಿಕ್ಷಾ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶ ಗುಂಟುರಿನ ದಾಚೆಪಲ್ಲಿಯಲ್ಲಿ ನಡೆದಿದೆ.
ಗುರಜಲಾಮಂಡಲದ ದೈದಾ ಗ್ರಾಮದ ಅಮರಲಿಂಗೇಶ್ವರ ಸ್ವಾಮಿ ದೇವಸ್ಥಾನ ಸಮೀಪ ಮರವೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಆರೋಪಿಯ ದೇಹ ಪತ್ತೆಯಾಗಿದೆ.
"ಆರೋಪಿಯ ಕುಟುಂಬ ಸದಸ್ಯರು ವ್ಯಕ್ತಿಯ ದೇಹವನ್ನು ಗುರುತಿಸಿದ್ದು ಇದೀಗ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ." ರಾಜ್ಯ ಗೃಹ ಸಚಿವ ಎನ್. ಚಿನ್ನರಾಜಪ್ಪ ಮತ್ತು ಡಿಜಿಪಿ ಎಂ. ಮಲಕೊಂಡಯ್ಯ ಮಾದ್ಯಮಕ್ಕೆ ತಿಳಿಸಿದ್ಡಾರೆ.
ಸುಬ್ಬಯ್ಯ ಬುಧವಾರದಂದು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದನು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಗುರುವಾರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಲ್ಲದೆ ರಾಚಿಪಲ್ಲಿಯಲ್ಲಿ ರಸ್ತೆತಡೆ ಸಹ ಹಮ್ಮಿಕೊಂಡಿದ್ದರು.
ಶುಕ್ರವಾರ ಸಹ ಪ್ರತಿಭಟನೆಗಳು ಮುಂದುವರಿದಿದ್ದವು.  ಯಾವುದೇ ಅಹಿತಕರ ಘಟನೆಗಳಾಗದಂತೆ ಮುನ್ನೆಚ್ಚರಿಕೆಗಾಗಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಆರೋಪಿಯ ಪತ್ತೆಗಾಗಿ 17 ಪೋಲೀಸ್ ತಂಡಗಳನ್ನು ರಚಿಸಲಾಗಿತ್ತು. ಅಲ್ಲದೆ   ಕೃಷ್ಣಾ ನದಿಯ ದಂಡೆಯ ಮೇಲೆ ಡ್ರೋನ್ ಕ್ಯಾಮರಾಗಳನ್ನೂ ಅಳವಡಿಸಲಾಗಿತ್ತು. 
ಆತ ಆತ್ಮಹತ್ಯೆಗೆ ಪ್ರಯತ್ನಿಸಬಹುದು ಎನ್ನುವ ಅನುಮಾನದೊಡನೆ ಪೋಲೀಸರು ನದಿದಂಡೆಯ ಮೇಲೆ ದೋಣಿಗಳೊಡನೆ ಸಜ್ಜಾಗಿದ್ದರು.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಯ ಪತ್ತೆ ಕಾರ್ಯಾಚರಣೆ ತೀವ್ರಗೊಳಿಸುವಂತೆ ಆದೇಶಿಸಿದ್ದರಲ್ಲದೆ ಸಂತ್ರಸ್ತೆಯ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT