ದೇಶ

ತ್ರಿಪುರಾಗೆ ವಿಶೇಷ ಪ್ಯಾಕೇಜ್ ಭರವಸೆ ನೀಡಿದ ಅರುಣ್ ಜೇಟ್ಲಿ

Lingaraj Badiger
ಅಗರ್ತಾಲ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರಿಗೆ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ.
ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ಅವರು ನಿನ್ನೆ ದೆಹಲಿಯಲ್ಲಿ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರದ 7ನೇ ವೇತನ ಆಯೋಗ ಜಾರಿ ಮತ್ತು ಇತರೆ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದ್ದರು.
ವರದಿಗಳ ಪ್ರಕಾರ,  ಅರುಣ್ ಜೇಟ್ಲಿ ಅವರು ಆರ್ಥಿಕ ಸಂಕಷ್ಟದಲ್ಲಿರುವ ತ್ರಿಪುರಾಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ.
ಬಿಪ್ಲಬ್ ಕುಮಾರ್ ದೇಬ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದು, ಮೊದಲ ಭೇಟಿಯಲ್ಲೇ 20 ಸಾವಿರ ಕೋಟಿ ರುಪಾಯಿಯ ವಿಶೇಷ ಪ್ಯಾಕೇಜ್ ಭರವಸೆ ಪಡೆದುಕೊಂಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ 7ನೇ ವೇತನ ಆಯೋಗ ಜಾರಿ ಮಾಡಲು ವಾರ್ಷಿಕ 14 ಸಾವಿರ ಕೋಟಿ ರುಪಾಯಿ ಅಗತ್ಯ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
SCROLL FOR NEXT