ಸಂಗ್ರಹ ಚಿತ್ರ 
ದೇಶ

ಶ್ರೀನಗರದಲ್ಲಿ ಎನ್'ಕೌಂಟರ್: ಸೇನಾ ಪಡೆ ಗುಂಡಿಗೆ 3 ಉಗ್ರರು ಹತ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಛತ್ತಬಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಛತ್ತಬಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 
ಶ್ರೀನಗರದ ತಬೆಲಾ ಛತ್ತಾಬಲ್ ಎಂಬ ಪ್ರದೇಶದಲ್ಲಿ ಉಗ್ರರು ಕಾರ್ಯಚಟುವಟಿಕೆಗಳು ನಡೆಸುತ್ತಿರುವ ಕುರಿತು ಮಾಹಿತಿ ತಿಳಿದ ಭದ್ರತಾ ಪಡೆಗಳು ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿತ್ತು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು, ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಉಗ್ರರು ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ ಸೇನಾ ಪಡೆ, ಸ್ಥಳವನ್ನು ಸುತ್ತುವರೆದು ಉಗ್ರರಿಗೆ ದಿಟ್ಟ ಉತ್ತರ ನೀಡಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ.ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 
ಎನ್ ಕೌಂಟರ್ ನಡೆಯುತ್ತಿದ್ದ ಸ್ಥಳದಲ್ಲಿ ವೇಗವಾಗಿ ಬರುತ್ತಿದ್ದ ವಾಹನವೊಂದು ಸ್ಥಳೀಯ ನಾಗರೀಕನಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. 
ಮೃತಪಟ್ಟ ವ್ಯಕ್ತಿಯನ್ನು ಆದಿಲ್ ಅಹ್ಮದ್ ಯಾದೂ ಎಂದು ಗುರ್ತಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ವ್ಯಕ್ತಿಯನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ. 
ಘಟನೆಗೆ ಕೆಲ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭದ್ರತಾ ಪಡೆಗಳ ಮೇಲೆ ಆರೋಪ ಮಾಡಿದ್ದಾರೆ. ಭದ್ರತಾ ಪಡೆಗಳ ಗುಂಡಿನ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದಾನೆಂದು ಆರೋಪಿಸಿದ್ದಾರೆ. 
ಈ ಆರೋಪವನ್ನು ತಳ್ಳಿಹಾಕಿರುವ ಅಧಿಕಾರಿಗಳು, ನೂರ್ಬಾಘ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆಂದು ಪೊಲೀಸ್ ವಕ್ತಾರರು ಹೇಳಿದ್ದಾರೆ. 
ಈ ನಡುವೆ ಸ್ಥಳದಲ್ಲಿ ಕೆಲ ಸ್ಥಳೀಯರು ಪ್ರತಿಭಟನೆಗಳನ್ನು ಕೂಡ ನಡೆಸಿದ್ದು, ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ವರದಿಗಳು ತಿಳಿಸಿವೆ. 
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಶ್ರೀನಗರಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!