ಮೊಹಮ್ಮದ್ ಅಲಿ ಜಿನ್ನಾ, ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರು 
ದೇಶ

ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿ, ನೆಹರುಗಿಂತ ಕಡಿಮೆಯಿಲ್ಲ ಜಿನ್ನಾ ಕೊಡುಗೆ: ಎಸ್‌ಪಿ ಸಂಸದ

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಗಿಂತ ಮೊಹಮ್ಮದ್ ಅಲಿ ಜಿನ್ನಾ ಅವರ ಕೊಡುಗೆ...

ಗೋರಖಪುರ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಗಿಂತ ಮೊಹಮ್ಮದ್ ಅಲಿ ಜಿನ್ನಾ ಅವರ ಕೊಡುಗೆ ಕಡಿಮೆ ಎನಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಪ್ರವೀಣ್ ನಿಶಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಮೊಹಮ್ಮದ್ ಅಲಿ ಜಿನ್ನಾ ಹೆಸರಲ್ಲಿ ಬಿಜೆಪಿ ಕೊಳಲು ರಾಜಕೀಯ ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಜೀ ಮತ್ತು ನೆಹರು ನೀಡಿದ ಕೊಡುಗೆಯಷ್ಟೇ ಜಿನ್ನಾ ಅವರು ಸಹ ನೀಡಿದ್ದಾರೆ ಎನ್ನುವುದನ್ನು ಮರೆಯುವಂತಿಲ್ಲ ಎಂದು ಹೇಳಿ ಪ್ರವೀಣ್ ಜಿನ್ನಾ ವಿವಾದಕ್ಕೆ ತುಪ್ಪ ಸುರಿದಿದ್ದಾರೆ. 
ದೇಶದ ಸ್ವಾತಂತ್ರ್ಯಕ್ಕೆ ಹಿಂದೂ-ಮುಸ್ಲಿಂರು ಸಮಾನ ಕೊಡುಗೆ ನೀಡಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಕೋಮು ಕಲಭೆಗಳನ್ನು ಪ್ರಚೋದಿಸುತ್ತಿದ್ದಾರೆ. ಇದು 2019ರ ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಧರ್ಮದ ಹೆಸರಲ್ಲಿ ದೇಶ ವಿಭಜನೆಯ ಪ್ರಯತ್ನವಾಗಿದೆ ಎಂದರು. 
ಬಿಜೆಪಿಯ ಇಂಥ ಕೊಳಕು ರಾಜಕೀಯದಾಟಕ್ಕೆ ನಾವು ಅವಕಾಶ ನೀಡುವುದಿಲ್ಲ. ಭಾರತ ಪ್ರತಿಯೊಬ್ಬ ಭಾರತೀಯನಿಗೂ ಸೇರಿದ್ದು ದೇಶದ ಏಕತೆಗೆ ಭಂಗ ತರಲು ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!