ಸುಪ್ರೀಂ ಕೋರ್ಟ್ 
ದೇಶ

ಕತುವಾ ಅತ್ಯಾಚಾರ ಪ್ರಕರಣ ಪಂಜಾಬ್ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ಪಂಜಾಬ್ ನ ಪಠಾಣ್ ಕೋಟ್ ಕೋರ್ಟ್ ವರ್ಗಾವಣೆ ಮಾಡಿದೆ.
ಪ್ರಕರಣವನ್ನು ಚಂಡೀಗಢಕ್ಕೆ ವರ್ಗಾವಣೆ ಮಾಡಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯ ಕುಟುಂಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಮುಕ್ತ ಮತ್ತು ಪಾರದರ್ಶಕ ವಿಚಾರಣೆಗಾಗಿ ಪ್ರಕರಣವನ್ನು ಪಂಜಾಬ್ ಗೆ ವರ್ಗಾವಣೆ ಮಾಡಿದೆ. ಅಲ್ಲದೆ ಕ್ಯಾಮೆರಾ ಮುಂದೆಯೇ ಪ್ರತಿನಿತ್ಯ ಪ್ರಕರಣ ವಿಚಾರಣೆ ನಡೆಸಬೇಕು ಎಂದು ಆದೇಶಿಸಿದೆ. ಆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕೋರ್ಟ್ ನಿರಾಕರಿಸಿದೆ.
ಪಠಾಣ್ ಕೋಟ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಈ ಪ್ರಕರಣವನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಆರೋಪಿಗಳ ವಿರುದ್ಧ ವಾದ ಮಂಡಿಸಲು ಪಠಾಣ್ ಕೋರ್ಟ್ ಕೋರ್ಟ್ ಸರ್ಕಾರಿ ಅಭಿಯೋಜಕರ ನೇಮಕಕ್ಕೆ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಇದೇ ವೇಳೆ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ, ಆಕೆಯ ಪರ ವಕೀಲರಿಗೆ ಮತ್ತು ಸಾಕ್ಷಿದಾರರಿಗೆ ಸೂಕ್ತ ಭದ್ರತೆ ನೀಡುವಂತೆ ಕೋರ್ಟ್ ಕಾಶ್ಮೀರ ಸರ್ಕಾರಕ್ಕೆ ಸೂಚಿಸಿದೆ.
ಅರಣ್ಯ ಪ್ರದೇಶಕ್ಕೆ ಕುದುರೆಗಳನ್ನು ಕರೆದುಕೊಂಡು ಹೋಗಿದ್ದ 8 ವರ್ಷದ ಬಾಲಕಿ ಆಸೀಫಾ ಜ.10 ರಂದು ನಾಪತ್ತೆಯಾಗಿದ್ದಳು. ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ