ದೇಶ

ಚಂಡಮಾರುತ ಎಚ್ಚರಿಕೆ; ಯಾವುದೇ ಕ್ಷಣದಲ್ಲಿಯೂ ಕಾರ್ಯಪ್ರವೃತ್ತರಾಗಲು ರಕ್ಷಣಾ ಸಿಬ್ಬಂದಿಗಳಿಗೆ ಸೂಚನೆ

Srinivas Rao BV
ನವದೆಹಲಿ: ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಭಾಗವಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. 
13 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.  ಕೆಲವು ಪ್ರದೇಶಗಳಲ್ಲಿ ಗಾಳಿ ಪ್ರತಿ ಗಂಟೆಗೆ 50-70 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. 
ಹವಾಮಾನ ಇಲಾಖೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಉತ್ತರ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ.  ಚಂಡಮಾರುತ ಅಪ್ಪಳಿಸುವ ಸಮಯದಲ್ಲಿ ವಾಹನ ಸಂಚಾರ ಮಾಡದಂತೆಯೂ ಹವಾಮಾನ ಇಲಾಖೆ ಎಚ್ಚರಿಕೆ ವಿಧಿಸಿದ್ದು, ಅಗ್ನಿಶಾಮಕ ಹಾಗೂ ಇತರ ತುರ್ತು ಸೇವೆಗಳ ಸಿಬ್ಬಂದಿಗಳಿಗೆ ಯಾವುದೇ ಕ್ಷಣದಲ್ಲಿಯೂ ಕಾರ್ಯಪ್ರವೃತ್ತರಾಗಲು ಸಿದ್ಧವಿರುವಂತೆ ಸೂಚನೆ ನೀಡಲಾಗಿದೆ. 
SCROLL FOR NEXT