ಮುಂಬೈ: 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನ ಬಂದರೆ ತಾವು ಪ್ರಧಾನಿಯಾಗುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿರುವುದರಿಂದ ಯಾವುದೇ ತಪ್ಪಿಲ್ಲ ಎಂದು ಮಂಗಳವಾರ ಎನ್ ಸಿಪಿ ಹೇಳಿದೆ.
2004ರಿಂದ 2014ರ ವರೆಗೆ ಯುಪಿಎ ಸರ್ಕಾರದ ಭಾಗವಾಗಿದ್ದ ಎನ್ ಸಿಪಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಜೊತೆ ಕೈಜೋಡಿಸುವ ನಿರೀಕ್ಷೆ ಇದೆ.
ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವ ಅಗತ್ಯ ಇಲ್ಲ ಮತ್ತು ಅವರು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎನ್ ಸಿಪಿ ರಾಷ್ಟ್ರೀಯ ವಕ್ತಾರ ನವಾಬ್ ಮಲಿಕ್ ಅವರು ಹೇಳಿದ್ದಾರೆ.
ದೇಶದ ಜನತೆ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನಗಳನ್ನು ನೀಡಿದರೆ ಸಹಜವಾಗಿಯೇ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆಯಷ್ಟೇ, 2019ರಲ್ಲಿ ಕಾಂಗ್ರೆಸ್ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೆ ತಾವು ಪ್ರಧಾನಿಯಾಗಲು ಸಿದ್ಧ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದರು.