ಶಹನವಾಜ್ ಹುಸೇನ್ 
ದೇಶ

ರಾಹುಲ್ ಗಾಂಧಿ ಮೊದಲು ರಾಜ್ಯ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸಲಿ : ಬಿಜೆಪಿ

ಪ್ರಧಾನಿಯಾಗಲು ಸಿದ್ಧ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಉನ್ನತ ಕನಸುಗಳನ್ನು ಕಾಣುತ್ತಿರುವವರು ಮೊದಲು ರಾಜ್ಯ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸಬೇಕು ಎಂದು ಹೇಳಿದೆ

ನವದೆಹಲಿ :  ಪ್ರಧಾನಿಯಾಗಲು  ಸಿದ್ಧ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ  ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನವಾಜ್ ಹುಸೇನ್, ಕಾಂಗ್ರೆಸ್ ಪಕ್ಷ ಎಲ್ಲೆಡೆ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ಉನ್ನತ ಕನಸುಗಳನ್ನು ಕಾಣುತ್ತಿರುವವರು ಮೊದಲು ರಾಜ್ಯ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.

ಪ್ರಧಾನಿಯಾಗಲು ಕನಸು ಕಾಣುವ ಹಕ್ಕು ರಾಹುಲ್ ಗಾಂಧಿ ಅವರಿಗೆ ಇದೆ. ಆದರೆ, ಅವರನ್ನು ನಾಯಕರೆಂದು ಕಾಂಗ್ರೆಸ್ ಪಕ್ಷದ ಅಂಗಪಕ್ಷಗಳೇ  ಒಪ್ಪಿಕೊಳ್ಳುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಹುಲ್ ಗಾಂಧಿ ಎಐಸಿಸಿ ಉಪಾಧ್ಯಕ್ಷರಾದ  ಬಳಿಕ ಕಾಂಗ್ರೆಸ್ 13 ರಾಜ್ಯಗಳಲ್ಲಿ ಅಸ್ತಿತ್ವ ಕಳೆದುಕೊಂಡಿದೆ.   ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಐದು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕ ಆರನೇ ರಾಜ್ಯವಾಗಲಿದೆ ಎಂದರು.

ರಾಹುಲ್ ಗಾಂಧಿ ಮನಸ್ಸಿನೊಳಗಿದ್ದ ಭಾವನೆ ಹೊರಗೆ  ಬಂದಿದೆ. ಆದರೆ, ಅದು ಅಷ್ಟು ಸುಲಭವಲ್ಲಾ, ಅವರ ನಾಯಕತ್ವದಲ್ಲಿ  ಕಾಂಗ್ರೆಸ್  ಯಾವ  ರಾಜ್ಯಗಳಲ್ಲಿಯೂ ಚುನಾವಣೆ ಗೆಲ್ಲುವುದಿಲ್ಲ.  ಪ್ರಧಾನಿಯಾಗುವುದು ಅವರ ಕನಸು ಆಗಲಿದ್ದು, ಪ್ರಧಾನಿ ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹುಸೇನ್   ಒತ್ತಿ ಹೇಳಿದರು.

ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸೋಲಲಿದೆ. ಇಲ್ಲಿಯೂ ಸೋತ ನಂತರ ರಾಹುಲ್ ಗಾಂಧಿ ಸಿಕ್ಸರ್ ಬಾರಿಸಲಿದ್ದಾರೆ ಎಂದು ಶಹನವಾಜ್ ಹುಸೇನ್ ಲೇವಡಿ  ಮಾಡಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!