ಶರದ್ ಪವಾರ್ 
ದೇಶ

ಅಧಿಕಾರ ಬದಲಾವಣೆಗೆ ದೇಶದಲ್ಲೀಗ ಸೂಕ್ತ ಸಮಯ: ಶರದ್ ಪವಾರ್

ದೇಶದಲ್ಲಿರುವ ಪರಿಸ್ಥಿತಿ ಅಧಿಕಾರ ಬದಲಾವಣೆಗೆ ಸೂಕ್ತ ಸಮಯ ಎನ್ನುವುದನ್ನು ಸೂಚಿಸುತ್ತಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.

ಮುಂಬೈ: ದೇಶದಲ್ಲಿರುವ ಪರಿಸ್ಥಿತಿ ಅಧಿಕಾರ ಬದಲಾವಣೆಗೆ ಸೂಕ್ತ ಸಮಯ ಎನ್ನುವುದನ್ನು ಸೂಚಿಸುತ್ತಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
2019 ರ ಚುನಾವಣೆಯ ಬಗ್ಗೆ ಮಾತನಾಡಿರುವ ಶರದ್ ಪವಾರ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಿರೋಧಪಕ್ಷ ಎಷ್ಟು ಸ್ಥಾನಗಳನ್ನು ಗಳಿಸಲಿದೆ ಎಂಬುದನ್ನು ಈಗಲೇ ಹೇಳುವುದು ಕಷ್ಟ ಎಂದು ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ. 
ದೇಶದಲ್ಲಿ ಈಗಿರುವ ಟ್ರೆಂಡ್ ಪ್ರಕಾರ ಅಧಿಕಾರ ಬದಲಾವಣೆಗೆ ಸೂಕ್ತವಾದ ಸಮಯ ಇದೆ. ಆದರೆ ವಿರೋಧ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಲಿದೆ ಎಂದು ಕೇಳಿದರೆ ಇಂತಿಷ್ಟೇ ಎಂದು ಹೇಳಲು ಸಾಧ್ಯವಿಲ್ಲ ಆದರೆ ಅಧಿಕಾರ ಬದಲಾವಣೆಗೆ ಮಾತ್ರ ಸಕರಾತ್ಮಕವಾದ ವಾತಾವರಣವಿದೆ ಎಂದು ಹೇಳಿದ್ದಾರೆ.
ಬಿಜೆಪಿ ವಿರೋಧಿ ಅಭಿಯಾನದಲ್ಲಿ ಕಾಂಗ್ರೆಸ್ ನ ಪರಿಶ್ರಮ ಸಾಕಷ್ಟಿದೆ ಎಂದು ಶರದ್ ಪವಾರ್ ಹೇಳಿದ್ದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಎನ್ ಸಿಪಿಯೊಂದಿಗೆ ಕೈ ಜೋಡಿಸಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!