ರಾಹುಲ್ ಗಾಂಧಿ 
ದೇಶ

ರಾಹುಲ್ ಹಗಲುಗನಸಿಗೆ ಅಭಿನಂದನೆಗಳು, ಆದರೆ 2024ರ ವರೆಗೆ ಪ್ರಧಾನಿ ಹುದ್ದೆ ಖಾಲಿಯಿಲ್ಲ: ಬಿಜೆಪಿ ಟಾಂಗ್

ರಾಹುಲ್ ಗಾಂಧಿ ಹಗಲು ಕನಸು ಕಾಣುತ್ತಿದ್ದಾರೆ, ಅವರ ಸುಂದರ ಕನಸುಗಳಿಗೆ ನಮ್ಮ ಅಭಿನಂದನೆಗಳು, ...

ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ, ಆದರೆ 2024 ರ ವರೆಗೆ ಆ ಹುದ್ದೆ ಖಾಲಿಯಿಲ್ಲ ಎಂದು ಬಿಜೆಪಿ ಹೇಳಿದೆ.
ತಾನು ಪ್ರಧಾನಿಯಾಗುವುದಕ್ಕೆ ಸಿದ್ಧ ಎಂದು ಇತ್ತೀಚೆಗೆ ರಾಹುಲ್ ಗಾಂಧಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಹೈದರಾಬಾದ್ ಬಿಜೆಪಿ  ಮುಖಂಡ ಷಹನವಾಜ್ ಹುಸೇನ್, ರಾಹುಲ್ ಗಾಂಧಿ ಹಗಲು ಕನಸು ಕಾಣುತ್ತಿದ್ದಾರೆ, ಅವರ ಸುಂದರ ಕನಸುಗಳಿಗೆ ನಮ್ಮ ಅಭಿನಂದನೆಗಳು, ಆದರೆ 2024ರ ವರೆಗೆ ಪ್ರಧಾನಿ ಹುದ್ದೆ ಖಾಲಿಯಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲೂ ಕೂಡ ದೇಶದ ಜನತೆ ನರೇಂದ್ರ ಮೋದಿ ಅವರನ್ನೇ ಆಯ್ಕೆ ಮಾಡುತ್ತಾರೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ, ಕಾಂಗ್ರೆಸ್ ಮುಖಂಡರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಗಾಂಧಿ ಮನೆತನದ ವಂಶವಾಹಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಹುಸೇನ್, ರಾಹುಲ್ ಗಾಂಧಿ ಎಐಸಿಸಿ ಉಪಾಧ್ಯಕ್ಷರಾಗಿ ನೇಮಕವಾದಾಗ ಕಾಂಗ್ರೆಸ್ 13 ರಾಜ್ಯಗಳನ್ನು ಕಳೆದುಕೊಂಡಿತ್ತು, ಈಗ ಮತ್ತೆ ರಾಹುಲ್ ಪಕ್ಷದ ಅಧ್ಯಕ್ಷರಾಗಿದ್ದಾರೆ ಮತ್ತೆ 5 ರಾಜ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?