ನ್ಯಾ.ಜೋಸೆಫ್ ಪದೋನ್ನತಿ: ಮೇ.11 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆ
ನ್ಯಾ.ಕೆಎಂ ಜೋಸೆಫ್ ಅವರ ಪದೋನ್ನತಿ ಬಗ್ಗೆ ನಿರ್ಧಾರ ಕೈಗೊಳ್ಳಲು ಮೇ.11 ರಂದು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನ ಸಭೆ ನಡೆಯಲಿದೆ.
ನವದೆಹಲಿ: ನ್ಯಾ.ಕೆಎಂ ಜೋಸೆಫ್ ಅವರ ಪದೋನ್ನತಿ ಬಗ್ಗೆ ನಿರ್ಧಾರ ಕೈಗೊಳ್ಳಲು ಮೇ.11 ರಂದು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನ ಸಭೆ ನಡೆಯಲಿದೆ.
ಸುಪ್ರೀಂ ಕೋರ್ತ್ ನ್ಯಾಯಾಧೀಶರನ್ನಾಗಿ ನ್ಯಾ.ಕೆಎಂ ಜೋಸೆಫ್ ಅವರಿಗೆ ಪದೋನ್ನತಿ ನೀಡುವ ಕೊಲಿಜಿಯಂ ಶಿಫಾರಸ್ಸನ್ನು ಏ.26 ರಂದು ಕೇಂದ್ರ ಸರ್ಕಾರ ತಡೆ ಹಿಡಿದಿತ್ತು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಲ್ಲಿ ಕೇರಳದ ಪ್ರಾತಿನಿಧ್ಯ ಸಾಕಷ್ಟಿದೆ ಎಂದಿದ್ದ ಕೇಂದ್ರ ಸರ್ಕಾರ ನ್ಯಾ.ಕೆಎಂ ಜೋಸೆಫ್ ಅವರ ಹಿರಿತನವನ್ನೂ ಪ್ರಶ್ನಿಸಿತ್ತು.
ಈ ಬಗ್ಗೆ ಕೊಲಿಜಿಯಂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದ್ದು ಮೇ.11 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನ್ಯಾ.ಕೆಎಂ ಜೋಸೆಫ್ ಪದೋನ್ನತಿ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.