ಮಮತಾ ಬ್ಯಾನರ್ಜಿ 
ದೇಶ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲ್ಲ, ಸಂಯುಕ್ತ ರಂಗಕ್ಕೆ ಭವಿಷ್ಯ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾನೇ ಮುಂದಿನ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಕೋಲ್ಕತ್ತಾ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾನೇ ಮುಂದಿನ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಕಾಂಗ್ರೆಸ್‌ಗೆ ಬಹುಮತ ಸಿಗಲ್ಲ, ಹೀಗಾಗಿ ಸಂಯುಕ್ತ ರಂಗಕ್ಕೆ ಭವಿಷ್ಯ ಎಂದು ಹೇಳಿದ್ದಾರೆ. 
ಇತರ ಪ್ರಾದೇಶಕ ಪಕ್ಷಗಳ ರಾಜಕೀಯ ಮುಖಂಡರೊಡನೆ ಈಗಾಗಲೇ ಚರ್ಚೆಗಳು ನಡೆಸುತ್ತಿರುವ ಮಮತಾ ಬ್ಯಾನರ್ಜಿ ಅವರು 2019ರ ಲೋಕಸಭೆ ಚುನಾವಣೆಗೆ ಕಸರತ್ತು ನಡೆಸಿದ್ದಾರೆ. ಈ ಮಧ್ಯೆ ಏಕಾಂಗಿ ಕಾಂಗ್ರೆಸ್‌ಗೆ ಬಹುಮತ ಸಿಗುವುದಿಲ್ಲ, ಹೀಗಾಗಿ ಭವಿಷ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಸಂಯುಕ್ತ ರಂಗವೇ ದೇಶವನ್ನು ಆಳಲಿದೆ ಎಂದು ಹೇಳಿದ್ದಾರೆ. 
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಮಮತಾ ಬ್ಯಾನರ್ಜಿ ಅವರು, ದೇಶದ ಹಲವು ರಾಜ್ಯಗಳಲ್ಲಿ ವಿವಿಧ ಪ್ರಾದೇಶಿಕ ಪಕ್ಷಗಳು ವಿಜಯಶಾಲಿಯಾಗಲಿವೆ. ಪ್ರಾದೇಶಿಕ ಪಕ್ಷಗಳೆಲ್ಲಾ ಒಂದಾಗಿ ಸಂಯುಕ್ತ ರಂಗವನ್ನು ರಚನೆ ಮಾಡಲಿವೆ. ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಒಂದು ವೇದಿಕೆ ರೂಪಿಸಿದರೆ ಅದು ದೇಶಕ್ಕೆ ಒಳ್ಳೆಯದ್ದು ಎಂದು ಹೇಳಿದ್ದಾರೆ. 
ಇನ್ನು ಮುಂದಿನ ಬಾರಿಗೆ ನಾನೇ ದೇಶದ ಪ್ರಧಾನಮಂತ್ರಿಯಾಗುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿರುವ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ನೀಡಲು ಮುಕ್ತರಾಗಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT