ನವದೆಹಲಿ: ಹೆಚ್ಚಿನ ಸಂಖ್ಯೆಯಲ್ಲಿ ಜನ ಮನೆಯಿಂದ ಹೊರ ಬಂದು ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ, ಅದರಲ್ಲೂ ವಿಶೇಷವಾಗಿ ಯವ ಜನತೆಗೆ ಕರೆ ನೀಡಿದ್ದಾರೆ.
ಕರ್ನಾಟಕದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾ ಹಣ ಏರ್ಪಟ್ಟಿದೆ.
ನನ್ನ ಸಹೋದರ ಮತ್ತು ಸಹೋದರಿಯರೇ ಇಂದು ನಡೆಯುತ್ತಿರುವ ಮತದಾನದಲ್ಲಿ ಹೆಚ್ಚೆಚ್ಚು ಜನ ಬಂದು ಮತದಾನ ಮಾಡಬೇಕು, ಅದರಲ್ಲೂ ಹೆಚ್ಚಾಗಿ ಯುವ ಜನತೆ ಪ್ರಜಾಪ್ರಭುತ್ವದ ಹಬ್ಬದಲ್ಲಿ ಬಂದು ಭಾಗಿಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.