ಕಾಂಗ್ರೆಸ್ ನ ಮಾಜಿ ನಾಯಕ ಈಗ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ! 
ದೇಶ

ಕಾಂಗ್ರೆಸ್ ನ ಮಾಜಿ ನಾಯಕ ಈಗ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ!

ಕಾಂಗ್ರೆಸ್ ನ ಮಾಜಿ ನಾಯಕ ಕನ್ನಾ ಲಕ್ಷ್ಮಿನಾರಾಯಣ ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ವಿಜಯವಾಡ: ಕಾಂಗ್ರೆಸ್ ನ ಮಾಜಿ ನಾಯಕ ಕನ್ನಾ ಲಕ್ಷ್ಮಿನಾರಾಯಣ ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. 
ಇದೇ ವೇಳೆ ಜಮ್ಮು-ಕಾಶ್ಮೀರಕ್ಕೂ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು ರವೀಂದ್ರ ರೈನಾ ಜಮ್ಮು-ಕಾಶ್ಮೀರ ಬಿಜೆಪಿಯ ನೂತನ ಅಧ್ಯಕ್ಷರಾಗಿದ್ದಾರೆ. ಬಿಜೆಪಿಯ ಈ ಹಿಂದಿನ ಜಮ್ಮು-ಕಾಶ್ಮೀರ ಅಧ್ಯಕ್ಷರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿರುವ ಹಿನ್ನೆಲೆಯಲ್ಲಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. 
2014 ರಲ್ಲೇ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ನ ಮಾಜಿ ಸಚಿವ ಲಕ್ಷ್ಮಿನಾರಾಯಣ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು. ಈ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಅಮಿತ್ ಶಾ ಕಾಂಗ್ರೆಸ್ ನ ಮಾಜಿ ನಾಯಕನನ್ನೇ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. 2019 ರಲ್ಲಿ ಲೋಕಸಭಾ ಚುನಾವಣೆ ಹಾಗೂ ಆಂಧ್ರಪ್ರದೆಶ ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್