ನಿರ್ಮಲಾ ಸೀತಾರಾಮನ್ 
ದೇಶ

ದೇಶವನ್ನು ರಕ್ಷಿಸುವ ಬದಲು ನಿರ್ಮಲಾ ಸೀತಾರಾಮನ್ ಬಿಜೆಪಿ ನಾಯಕರನ್ನು ರಕ್ಷಿಸುತ್ತಿದ್ದಾರೆ: ಕಾಂಗ್ರೆಸ್

ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಕೊಡುಗೆ ಶೂನ್ಯ ಎಂದು ಹೇಳಿದೆ.

ನವದೆಹಲಿ: ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಕೊಡುಗೆ ಶೂನ್ಯ ಎಂದು ಹೇಳಿದೆ. 
ನಿರ್ಮಲಾ ಸೀತಾರಾಮನ್ ದೇಶವನ್ನು ರಕ್ಷಿಸುವುದರ ಬದಲು ಭ್ರಷ್ಟ ಬಿಜೆಪಿ ಸಚಿವರನ್ನು ಸಮರ್ಥಿಸಿಕೊಳ್ಳುವುದರಲ್ಲೇ ಕಾಲಹರಣ ಮಾಡುತ್ತಾದೆ. ದೇಶವನ್ನು ರಕ್ಷಿಸುವುದಕ್ಕಿಂತಲೂ ಬಿಜೆಪಿ ಸಚಿವರನ್ನು ರಕ್ಷಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ. 
ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಕುಟುಂಬ ವಿದೇಶದಲ್ಲಿ ಹೊಂದಿರುವ ಆಸ್ತಿಯ ಬಗ್ಗೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ದೇಶ ರಕ್ಷಣೆ ಕೆಲಸದಲ್ಲಿ ತೊಡಗುವುದರ ಬದಲು ಪಕ್ಷದ ರಕ್ಷಣೆಯಲ್ಲಿ ತೊಡಗಿರುತ್ತಾರೆ  ಎಂದು ಕಾಂಗ್ರೆಸ್ ನಾಯಕ ಪವನ್ ಖೇರ ಆರೋಪಿಸಿದ್ದಾರೆ. 
ಕೇಂದ್ರ ಸಚಿವರುಗಳು ವಿರೋಧಪಕ್ಷಗಳ ಪ್ರಶ್ನೆಗೆ ಉತ್ತರಿಸುವುದಿಲ್ಲ, ನಿರ್ಮಲಾ ಸೀತಾರಾಮನ್ ಅವರು ರಾಫೆಲ್ ಫೈಟರ್ ಜೆಟ್ ಒಪ್ಪಂದದ ಮೊತ್ತವನ್ನು ಬಹಿರಂಗಪಡಿಸುವುದಿಲ್ಲ, ಈ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಖೇರಾ ಹೇಳಿದ್ದಾರೆ.  ಚಿದಂಬರಂ ಆಸ್ತಿಗೆ ಸಂಬಂಧಿಸಿದಂತೆ ಅವರ ಲೆಕ್ಕಪರಿಶೋಧಕರು ಈಗಾಗಲೇ ಹೇಳಿಕೆ ನೀಡಿದ್ದಾರೆ, ಇದನ್ನು ಆದಾಯ ತೆರಿಗೆ ಇಲಾಖೆ ಕೋರ್ಟ್ ನಲ್ಲಿ ಪ್ರಶ್ನಿಸುತ್ತದೆ. ಬಿಜೆಪಿ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!