ಶಶಿ ತರೂರ್-ಸುನಂದಾ ಪುಷ್ಕರ್ 
ದೇಶ

ಚಾರ್ಜ್'ಶೀಟ್ ಅಸಮಂಜಸ, ಇದರ ವಿರುದ್ಧ ಹೋರಾಡುತ್ತೇನೆ: ಶಶಿ ತರೂರ್

ಸುನಂದ ಪುಷ್ಕರ್ ನಿಗೂಢ ಸಾವು ಪ್ರಕರಣದ ಚಾರ್ಜ್'ಶೀಟ್ ನಲ್ಲಿ ಪತಿ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಹೆಸರು ದಾಖಲಿಸಿರುವುದಕ್ಕೆ ಆಕ್ಷೇಪ...

ನವದೆಹಲಿ: ಸುನಂದ ಪುಷ್ಕರ್ ನಿಗೂಢ ಸಾವು ಪ್ರಕರಣದ ಚಾರ್ಜ್'ಶೀಟ್ ನಲ್ಲಿ ತಮ್ಮ ಹೆಸರು ದಾಖಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಚಾರ್ಜ್ ಶೀಟ್ ಒಂದು ಅಸಮಂಜಸ ಹಾಗೂ ಇದರ ವಿರುದ್ಧ ಹೋರಾಡುತ್ತೇನೆ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಇಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವರಿಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು ಇದರಲ್ಲಿ ಆರೋಪಿ ಎಂದು ಹೆಸರಿಸಲ್ಪಟ್ಟಿರುವ ಏಕೈಕ ವ್ಯಕ್ತಿ ಶಶಿ ತರೂರ್. 
ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ಅಸಮಂಜಸವಾಗಿದ್ದು ಇದರ ವಿರುದ್ಧ ನಾನು ಹೋರಾಡುತ್ತೇನೆ ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. 
ದೆಹಲಿ ಪೊಲೀಸರ ವಿಧಾನಗಳು ಅಥವಾ ಪ್ರೇರಣೆಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅಕ್ಟೋಬರ್ 17ರಂದು ಕಾನೂನು ಅಧಿಕಾರಿ ದೆಹಲಿ ಹೈಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ಯಾರ ವಿರುದ್ಧವೂ ಏನೂ ಕಂಡು ಬಂದಿಲ್ಲ ಎಂದು ಹೇಳಿದ್ದು ಇದಾದ ಆರು ತಿಂಗಳಲ್ಲೇ ಸುನಂದ ಆತ್ಮಹತ್ಯೆಗೆ ನಾನು ಪ್ರೇರಣೆ ನೀಡಿದ್ದೇನೆ ಎಂದು ಚಾರ್ಚ್ ಶೀಟ್ ಸಲ್ಲಿಸಿರುವುದು, ನಂಬಲಾಗದು ಎಂದು ಸರಣಿ ಟ್ವೀಟ್ ಮಾಡಿದ್ದಾರೆ. 
ಶಶಿ ತರೂರ್ ಅವರು ಸುನಂದಾರನ್ನು 2010ರಲ್ಲಿ ವಿವಾಹವಾಗಿದ್ದರು. ಸುನಂದಾ ಪುಷ್ಕರ್ ಅವರು 2014 ಜನವರಿ 17ರಂದು ದೆಹಲಿಯ ಹೊಟೇಲೊಂದರ ಕೊಠಡಿಯೊಂದರಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್