ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ
ನವದೆಹಲಿ; ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಕಳೆದ ಶನಿವಾರವಷ್ಟೇ ಜೇಟ್ಲಿಯವರು ಏಮ್ಸ್ ಆಸ್ಪತ್ರೆದೆ ದಾಖಲಾಗಿದ್ದು, ಇಂದು ಬೆಳಿಗ್ಗೆ ಜೇಟ್ಲಿಯವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿಯವರಿಗೆ ಕಳೆದೊಂದು ತಿಂಗಳಿಂದ ಡಯಾಲಿಸಿಸ್ ಮಾಡಲಾಗುತ್ತಿತ್ತು.
ಲಂಡನ್ ನಲ್ಲಿ ಆಯೋಜಿಸಲಾಗಿದ್ದ 10ನೇ ಭಾರತ ಮತ್ತು ಬ್ರಿಟನ್ ಆರ್ಥಿಕ ಸಮಾವೇಶಕ್ಕೆ ತೆರಳುವ ಕಾರ್ಯಕ್ರಮವನ್ನು ಅನಾರೋಗ್ಯದ ಹಿನ್ನಲೆಯಲ್ಲಿ ಜೇಟ್ಲಿ ರದ್ದು ಗೊಳಿಸಿದ್ದರು.
ಏ.6 ರಂದು ಮೊದಲ ಬಾರಿಗೆ ತಮ್ಮ ಅನಾರೋಗ್ಯದ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಜೇಟ್ಲಿಯವರು ಮಾಹಿತಿ ಹಂಚಿಕೊಂಡಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಮುಂದಿನ ಚಿಕಿತ್ಸೆ ಕುರಿತು ವೈದ್ಯರು ನಿರ್ಧಾರಿಸಲಿದ್ದಾರೆಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics