ನರೇಂದ್ರ ಮೋದಿ-ವ್ಲಾಡಿಮಿರ್ ಪುಟೀನ್
ನವದೆಹಲಿ: ರಷ್ಯಾದ ಸೋಚಿಯಲ್ಲಿ ಮೇ 21ಕ್ಕೆ ಅನೌಪಚಾರಿಕ ಶೃಂಗಸಭೆ ನಡೆಯಲಿದ್ದು ಇದರಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಗೆ ಪ್ರಯಾಣಿಸಲಿದ್ದು ಅಧ್ಯಕ್ಷ ವ್ಲಾಡಿಮಿರ್ ಪುಟೀನ್ ಜೊತೆ ಚರ್ಚೆ ನಡೆಸಲಿದ್ದಾರೆ.
ಮೇ 21ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಗೆ ಪ್ರಯಾಣಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಘೋಷಿಸಿದೆ.
ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ವಿಶಾಲ ಮತ್ತು ದೂರ ದೃಷ್ಟಿಕೋನದಿಂದಾಗಿ ನಮ್ಮ ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಉಭಯ ಮುಖಂಡರು ಅಭಿಪ್ರಾಯಗಳನ್ನು ವಿನಿಮಯ ಮಾಡಲು ಇದು ಒಂದು ಪ್ರಮುಖ ಸಂದರ್ಭವಾಗಿದೆ ಎಂದು ವಿದೇಶಾಂಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ ಉಭಯ ನಾಯಕರು ತಮ್ಮ ರಾಷ್ಟ್ರದ ಅಭಿವೃದ್ಧಿಯ ಆಧ್ಯತೆ ಮತ್ತು ದ್ವಿಪಕ್ಷೀಯ ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ಎಂಇಎ ಹೇಳಿದೆ.
ಇನ್ನು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅನೌಪಚಾರಿಕ ಶೃಂಗಸಭೆಗಾಗಿ ಚೀನಾಗೆ ತೆರಳಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಂದಿಗೆ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದರು.