ಸಂಗ್ರಹ ಚಿತ್ರ 
ದೇಶ

ಶೀಘ್ರ ಗುಣಮುಖನಾಗಿ ವಾಪಸ್ ಆಗುತ್ತೇನೆ: ಗೋವಾ ಸಿಎಂ ಮನೋಹರ್ ಪರಿಕ್ಕರ್

ಶೀಘ್ರವೇ ಗುಣಮುಖನಾಗಿ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಪಣಜಿ: ಶೀಘ್ರವೇ ಗುಣಮುಖನಾಗಿ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಭಾನುವಾರ ಈ ಬಗ್ಗೆ ವಿಡಿಯೋ ಸಂದೇಶ ರವಾನೆ  ಮಾಡಿರುವ ಪರಿಕ್ಕರ್ ಅವರು, ಇನ್ನು ಕೆಲವೇ ವಾರಗಳಲ್ಲಿ ಚಿಕಿತ್ಸೆ ಅಂತ್ಯವಾಗಲಿದೆ. ಚಿಕಿತ್ಸೆ ಅಂತ್ಯವಾಗುತ್ತಿದ್ದಂತೆಯೇ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ಪರಿಕ್ಕರ್ ಹೇಳಿದ್ದಾರೆ.
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು, ಪ್ಯಾಂಕ್ರಿಯಾಸ್ ನಿಂದ ಬಳಲುತ್ತಿದ್ದು, ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಗೋವಾ ಸಿಎಂ ಪರಿಕ್ಕರ್ ಅವರ ವಿಡಿಯೋ ಸಂದೇಶವನ್ನು ನಿನ್ನೆ ಅಮಿತ್ ಶಾ ಅವರ ಗೋವಾ ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಗಿತ್ತು. ಈ ಹಿಂದೆ ಮುಂಬೈನ ಲೀಲಾವತಿ ಆಸ್ಪತ್ರೆಯಗೆ ದಾಖಲಾಗಿದ್ದ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಅವರು ಮುಂದಿನ ವಾರಾಂತ್ಯದೊಳಗೆ ಭಾರತಕ್ಕ ವಾಪಸ್ ಆಗಬಹುದು ಎಂದು ಹೇಳಲಾಗುತ್ತಿದೆ.
ಅಮೆರಿಕಕ್ಕೆ ತೆರಳವುದಕ್ಕೂ ಮುನ್ನ ಪರಿಕ್ಕರ್ ಅವರು ತಮ್ಮ ಅನುಪಸ್ಥಿತಿಯಲ್ಲಿ ಸರ್ಕಾರ ಮುಂದುವರಿಕೆಗಾಗಿ ಮೂರು ಸದಸ್ಯರ ಸಲಹಾ ಸಮಿತಿ ರಚನೆ ಮಾಡಿದ್ದರು. ಅಲ್ಲದೆ ಅಮೆರಿಕ ಆಸ್ಪತ್ರೆಯಲ್ಲಿದ್ದುಕೊಂಡೇ ಸರ್ಕಾದ ಕಾರ್ಯವೈಖರಿಗಳನ್ನು ಪರಿಕ್ಕರ್ ಮೇಲುಸ್ತುವಾರಿ ಮಾಡುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!