ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಬಂಗಾಳ ಸರ್ಕಾರದಿಂದ ವಿವರಣೆ ಕೇಳಿದ ಕೇಂದ್ರ 
ದೇಶ

ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಬಂಗಾಳ ಸರ್ಕಾರದಿಂದ ವಿವರಣೆ ಕೇಳಿದ ಕೇಂದ್ರ

ಪಶ್ಚಿಮ ಬಂಗಾಳದಲ್ಲಿ ಮೇ.14 ರಂದು ನಡೆದ ಪಂಚಾಯತ್ ಚುನಾವಣೆಯ ವೇಳೆ ನಡೆದ ಹಿಂಸಾಚಾರದಲ್ಲಿ 10 ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದರ ಬಗ್ಗೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರಣೆ ಕೇಳಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮೇ.14 ರಂದು ನಡೆದ ಪಂಚಾಯತ್ ಚುನಾವಣೆಯ ವೇಳೆ ನಡೆದ ಹಿಂಸಾಚಾರದಲ್ಲಿ 10 ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದರ ಬಗ್ಗೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರಣೆ ಕೇಳಿದೆ. 
ಹಿಂಸಾಚಾರದಲ್ಲಿ 10 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನೂ ಹೊಡೆದುರುಳಿಸಲಾಗಿದೆ. ದಕ್ಷಿಣ 24 ಪರ್ಗನಾಸ್ ಜಿಲ್ಲೆಯ ಕುಲ್ತಾಲಿ ಎಂಬ ಪ್ರದೇಶದಲ್ಲಿ ಸಿಪಿಐ ಕಾರ್ಯಕರ್ತನ ಮೇಲೆ ದಾಳಿ ಕೂಡ ನಡೆದಿದ್ದು, ಉತ್ತರ 24 ಪರ್ಗನಾಸ್ ನಲ್ಲಿದ್ದ ಮನೆಗೆ ಕಳೆದ ರಾತ್ರಿ ಬೆಂಕಿ ಹಚ್ಚಿದ ಪರಿಣಾಮ ಸಿಪಿಐ ಕಾರ್ಯಕರ್ತ ಹಾಗೂ ಆತನ ಪತ್ನಿ ಸಜೀವ ದಹನವಾಗಿದ್ದಾರೆಂದು ಹೇಳಲಾಗುತ್ತಿದೆ.   ಮುರ್ಶಿದಾಬಾದ್ ನಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟ ಪರಿಣಾಮ ಸ್ಥಳದಲ್ಲಿದ್ದ ಜನರು ಬ್ಯಾಲೆಟ್ ಪೇಪರ್ ಗಳನ್ನು ಎಸೆದು ಮತದಾನ ಕ್ಷೇತ್ರಗಳಿಂದ ದೂರ ಹೋಗಿದ್ದಾರೆ. ಘರ್ಷಣೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ