ದೇಶ

ರೆಸಾರ್ಟ್ ರಾಜಕಾರಣದ ಸುಳಿವು: ಕರ್ನಾಟಕ ಶಾಸಕರಿಗೆ ಕೇರಳ ಪ್ರವಾಸೋದ್ಯಮ ಇಲಾಖೆ ಆಹ್ವಾನ!

Srinivas Rao BV
ತಿರುವನಂತಪುರಂ: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಸರ್ಕಾರ ರಚನೆ ಮಾಡುವುದಕ್ಕೆ ಯಾವ ಪಕ್ಷಕ್ಕೂ ಬಹುಮತವಿಲ್ಲದೇ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. 
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ 2008 ರಲ್ಲಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಶಾಸಕರ ಕೊರತೆ ಎದುರಾದಾಗ ರಾಜ್ಯ ರಾಜಕಾರಣದಲ್ಲಿ ರೆಸಾರ್ಟ್ ರಾಜಕಾರಣದ ಕಾರಣಕ್ಕೆ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಚುನಾವಣೆಯಲ್ಲಿಯೂ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು ಈಗಲೂ ರೆಸಾರ್ಟ್ ರಾಜಕಾರಣದ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆ ಕರ್ನಾಟಕದ ಶಾಸಕರಿಗೆ ಕೇರಳಕ್ಕೆ ಬರುವಂತೆ ಆಹ್ವಾನ ನೀಡಿದೆ. 
"ನಾವು ಕರ್ನಾಟಕದ ಶಾಸಕರಿಗೆ ದೇವರ ನಾಡಿನ ರೆಸಾರ್ಟ್ ಗಳಿಗೆ ಭೇಟಿ ನೀಡುವಂತೆ ಆಹ್ವಾನ ನೀಡುತ್ತೇವೆ" ಎಂದು ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ ಮಾಡಿದೆ.  
SCROLL FOR NEXT