ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡಿರುವುದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವುದರ ಬಗ್ಗೆ ಸಿಪಿಐ(ಎಂ) ನ ಸೀತಾರಾಮ್ ಯೆಚೂರಿ ಪ್ರತಿಕ್ರಿಯೆ ನೀಡಿದ್ದಾರೆ.
ಮಣಿಪುರ, ಗೋವಾಗಳಲ್ಲಿ ಏಕೈಕ ದೊಡ್ಡ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನ ನೀಡಲಾಗಿರಲಿಲ್ಲಮ್ ಕರ್ನಾಟಕದಲ್ಲಿಯೂ ಅದೇ ಮಾದರಿಯನ್ನು ಪಾಲಿಸಬೇಕೆಂದು ಸೀತಾರಾಮ್ ಯೆಚೂರಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಸೀತಾರಾಮ್ ಯೆಚೂರಿ ಟ್ವಿಟರ್ ನಲ್ಲಿ ಬರೆದಿದ್ದಾರೆ.