ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಯೋಗೇಶ್ವರ್ ಮಿಶ್ರಾ
ವಾರಣಾಸಿ; ಮೇಲ್ಸೇತುವೆ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಸ್ಥರಿಗೆ ಶೀಘ್ರದಲ್ಲಿಯೇ ಪರಿಹಾರ ಹಣವನ್ನು ನೀಡಲಾಗುತ್ತದೆ ಎಂದು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಯೋಗೇಶ್ವರ್ ಮಿಶ್ರಾ ಅವರು ಬುಧವಾರ ಹೇಳಿದ್ದಾರೆ.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಮೇಲ್ಸೇತುವೆ ದುರಂತ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಸಂತ್ರಸ್ತರಿಗೆ ಶೀಘ್ರದಲ್ಲಿಯೇ ಪರಿಹಾರ ಧನವನ್ನು ನೀಡಲಾಗುತ್ತದೆ. ದುರಂತದಲ್ಲಿ 15 ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆಂದು ಹೇಳಿದ್ದಾರೆ.
ಉತ್ತರಪ್ರದೇಶದ ವಾರಣಾಸಿಯಲ್ಲಿ ನಿನ್ನೆಯಷ್ಟೇ ನಿರ್ಮಾಣ ಹಂತದ ಮೇಲ್ಸೇತುವೆಯೊಂದು ಕುಸಿದು ಬಿದ್ದಿತ್ತು. ದುರ್ಘಟನೆಯಲ್ಲಿ 18ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿತ್ತು.
ವಾರಣಾಸಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ನಿರ್ಮಾಮ ಹಂತದ ಮೇಲ್ಸೇತುವೆಯ ಭಾರೀ ದೊಡ್ಡ ಕಾಂಕ್ರೀಟ್ ಚಪ್ಪಡಿಯೊಂದು ಕೆಳಕ್ಕೆ ಕುಸಿದು ಬಿದ್ದಿತ್ತು. ಬಸ್ ಮತ್ತು ಕಾರುಗಳು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದವು. ಮೇಲ್ಸೇತುವೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಹಲವಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯದಲ್ಲಿ ಎನ್'ಡಿಆರ್ಎಫ್ ಪಡೆಗಳು ಕೈಜೋಡಿಸಿವೆ.