ದೇಶ

ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ಕೊಡದಿದ್ದರೆ, ಸಂಸತ್ತಿನ ಕಲಾಪಕ್ಕೆ ಅಡ್ಡಿ: ಶಿವಸೇನೆ

Shilpa D
ಮುಂಬಯಿ: ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ಕೊಡದಿದ್ದರೆ, ಸಂಸತ್ತಿನ ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿ ಪಡಿಸುವ ಸಾಧ್ಯತೆಗಳಿವೆ ಎಂದು ಶಿವಸೇನೆ ಸಂಜಯ್ ರಾವತ್ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು 116 ಶಾಸಕರ ಬೆಂಬಲ ಹೊಂದಿವೆ ಎಂಬ ನಂಬಿಕೆ ನನಗಿದೆ, ಆದರೆ ಇದುವರೆಗೂ ರಾಜ್ಯಪಾಲರು ಅವರರಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿಲ್ಲ, ಇದರಿಂದ ಮತ್ತೆ ಸಂಸತ್ತಿನಲ್ಲಿ ಕಲಾಪಕ್ಕೆ ಅಡ್ಡಿ ಪಡಿಸುವ ಸಾಧ್ಯತೆಯಿರುತ್ತದೆ ಎಂದು ಹೇಳಿದ್ದಾರೆ.
ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ನೈತಿಕತೆ ಆಧಾರದ ಮೇಲೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ, ಆದರೆ ಗೋವಾ ಮತ್ತು ಮಣಿಪುರಗಳಲ್ಲಿ ಇಂಥ ನಿರ್ಧಾರ ಏಕೆ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿರುವ ಅವರು, ಕರ್ನಾಟಕದ ಸ್ಥಿತಿ ತುಂಬಾ ವಿಭಿನ್ನವಾಗಿದೆ ಎಂದು ಹೇಳಿದ್ದಾರೆ. 
ಕಿಂಗ್ ಮೇಕರ್ ಆಗಲು ಹೊರಟಿದ್ದ ಜೆಡಿಎಸ್ ಕಿಂಗ್ ಆಗುತ್ತಿದ್ದಾರೆ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿ ವಿರೋಧ ಪಕ್ಷದಲ್ಲಿ ಕೂರುವುದು ದುರಾದೃಷ್ಟ ಎಂದು ಹೇಳಿದ್ದಾರೆ.
SCROLL FOR NEXT