ಮುಂಬೈ: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರಬಹುದು. ಆದರೆ, ಬಹುಮತ ಸಾಬೀತುಪಡಿಸುವುದು ಕಷ್ಟ ಎಂದು ಶಿವಸೇನೆ ಗುರುವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿರಬಹುದು. ಆದರೆ, ಬಹುಮತ ಸಾಬೀತುಪಡಿಸುವುದು ಕಷ್ಟ. ಹೀಗಾಗಿ ರಾಜ್ಯಪಾಲರು ಬಹುಮತ ಇರುವವರಿಗೆ ಆಹ್ವಾನ ನೀಡಬೇಕಿತ್ತು. ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವವೇ ಇಲ್ಲದಿದ್ದಾಗ ಕಗ್ಗೊಲೆ ಯಾರದ್ದಾಗೂತ್ತದೆ? ಎಂದು ಪ್ರಶ್ನಿಸಿದ್ದಾರೆ.