ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗುತ್ತಿದ್ದು, ಮಧ್ಯಾಹ್ನ 12 ಗಂಟೆಯವರೆಗೆ ಆಡಳಿತರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) 2, 467 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ರಾಜ್ಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಟಿಎಂಸಿ 2467 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 2,683 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ 386 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಮತ್ತು 231 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಿಪಿಐಎಂ 94 ಗ್ರಾಮ ಪಂಚಾಯ್ತಿಗಳಲ್ಲಿ ಗೆಲುವು ಸಾಧಿಸಿದ್ದು, 163 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ಕೇವಲ 33 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 55 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೇ 14ರಂದು 621 ಜಿಲ್ಲಾ ಪರಿಷತ್, 6123 ಪಂಚಾಯತ್ ಸಮಿತಿ ಹಾಗೂ 31,802 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics