ನವೆಂಬರ್ : ಯಡಿಯೂರಪ್ಪ ಭವಿಷ್ಯ ಅವರು ರಾಜ್ಯಪಾಲರಿಗೆ ಕೊಟ್ಟ ಪತ್ರದಲ್ಲಿ ಅಡಗಿದೆ .ಅದರಲ್ಲಿ ಬಿಜೆಪಿಯ 104 ಶಾಸಕರ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ಸರ್ಕಾರದ ರಚನೆಯು ಈ ಪ್ರಕರಣದ ಅಂತಿಮ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದ ನಂತರ ಚಿದಂಬರಂ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಯಡಿಯೂರಪ್ಪ ರಾಜ್ಯಪಾಲರಿಗೆ ಕೊಟ್ಟಿರುವ ಪತ್ರದಲ್ಲಿ 104 ಕ್ಕಿಂತ ಹೆಚ್ಚಿನ ಸಂಖ್ಯೆಯ ಶಾಸಕರ ಬಗ್ಗೆ ಉಲ್ಲೇಖಿಸಿಲ್ಲ. ರಾಜ್ಯಪಾಲರ ಆಹ್ವಾನವು ಯಾವುದೇ ಸಂಖ್ಯೆಯನ್ನು ಉಲ್ಲೇಖಿಸುವುದಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ , ಜೆಡಿಎಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳ್ಳುವವರೆಗೂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬಾರದಿತ್ತು ಎಂದು ಅವರು ಹೇಳಿದ್ದಾರೆ.
ಆದರೆ, ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂಕೋರ್ಟ್ ಅಡ್ಡಿಪಡಿಸದ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮಧ್ಯರಾತ್ರಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ.