ಕಾಂಗ್ರೆಸ್ ಪರ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿರುವ ವಕೀಲ ಅಭಿಶೇಕ್ ಮನು ಸಿಂಘ್ವಿ
ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮ ಸುಪ್ರೀಂ ಕೋರ್ಟ್ ವರೆಗೂ ತಲುಪಿದ್ದು, ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ವಿರೋಧಿಸಿ ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರು ಲಘು ಹಾಸ್ಯ ಮಾಡಿದ್ದಾರೆ.
ರೆಸಾರ್ಟ್ ರಾಜಕಾರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಜೋಕ್ ನ್ನು ಉಲ್ಲೇಖಿಸಿದ್ದು ರೆಸಾರ್ಟ್ ಓನರ್ ಗೆ 117 ಶಾಸಕರ ಬೆಂಬಲವಿದೆ ಎಂದು ಹೇಳಿದ್ದಾರೆ. " ನನಗೆ ಸರ್ಕಾರ ರಚಿಸಲು 117 ಶಾಸಕರ ಬೆಂಬಲವಿದೆ ಎಂದು ಶಾಸಕರು ತಂಗಿರುವ ರೆಸಾರ್ಟ್ ಮಾಲಿಕ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂಬ ಲಘು ಹಾಸ್ಯದ ಬರಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ನ್ಯಾ.ಎ.ಕೆ ಸಿಕ್ರಿ ಹೇಳಿದ್ದಾರೆ.
ಸರ್ಕಾರ ರಚನೆಗೆ ಬಹುಮತದ ಕೊರತೆ ಎದುರಿಸುತ್ತಿರುವ ಬಿಜೆಪಿಯಿಂದ ಶಾಸಕರ ಹೈಜಾಕ್ ಮಾಡುವ ಭೀತಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿ ತಂಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics