ನವದೆಹಲಿ: ನೈಋತ್ಯ ಮಾನ್ಸೂನ್ ಮೇ 29ರಂದು ಕೇರಳ ಪ್ರವೇಶಿಸಲಿದೆ. ಸಾಮಾನ್ಯವಾಗಿ ಮಾನ್ಸೂನ್ ಪ್ರಾರಂಭಕ್ಕೆ ಮೂರು ದಿನಗಳ ಮುನ್ನವೇ ಭಾರತಕ್ಕೆ ಮಾನ್ಸೂನ್ ಆಗಮಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಹೇಳಿದೆ.
ಅಂಡಮಾನ್ ಸಮುದ್ರ ತೀರದಲ್ಲಿ ಮೇ ತಿಂಗಳ 23ಕ್ಕೆ ಮಳೆಗಾಲ ಪ್ರಾರಂಭವಾಗಲಿದ್ದು ನಾಲ್ಕೈದು ದಿನಗಳ ಬಳಿಕ ಕೇರಳದಲ್ಲಿ ಮಾನ್ಸೂನ್ ಪ್ರವೇಶವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಳೆದ ತಿಂಗಳೂ ಹವಾಮಾನ ಇಲಾಖೆ ಬಿಡುಗಡೆಗೊಳಿಸಿದ್ದ ಮಾನ್ಸೂನ್ ಮುನ್ಸೂಚನೆಯಲ್ಲಿ ಈ ವರ್ಷ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿತ್ತು.