ದೇಶ

ಹೆಚ್ ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Sumana Upadhyaya

ನವದೆಹಲಿ: ಕರ್ನಾಟಕದಲ್ಲಿ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಜೆಪಿಯಲ್ಲಿ ಬಹುಮತ ಸಾಬೀತುಪಡಿಸಲು ತೀವ್ರ ಕಸರತ್ತು ನಡೆಯುತ್ತಿದ್ದರೆ, ಕಾಂಗ್ರೆಸ್ -ಜೆಡಿಎಸ್ ನಲ್ಲಿ ಸರ್ಕಾರವನ್ನು ಉರುಳಿಸಿ, ತಾವು ಅಧಿಕಾರ ಗಿಟ್ಟಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿವೆ, ಈ ಮಧ್ಯೆ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಇಂದು ತಮ್ಮ 86ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಈ ಸಂದರ್ಭದಲ್ಲಿ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನೆಲ್ಲಾ ಬದಿಗಿತ್ತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

''ಮಾಜಿ ಪ್ರಧಾನಿ ದೇವೇಗೌಡರ ಜೊತೆ ಮಾತನಾಡಿದ್ದು, ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದೇನೆ, ಅವರ ಅವರು ಆರೋಗ್ಯವಂತರಾಗಿ ದೀರ್ಘಾಯುಸ್ಸು ಬಾಳಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

SCROLL FOR NEXT