ಡೈಮಂಡ್ ಹಾರ್ಬರ್: ಪಂಚಾಯತ್ ಚುನಾವಣೆಯಲ್ಲಿ ತೃಣಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಯಲ್ಲಿ ನಿಂತ ಕುಟುಂಬ ಸದಸ್ಯೆ ಸೋಲು ಕಂಡ ಹಿನ್ನಲೆಯಲ್ಲಿ ಮಹಿಳಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮಬಂಗಾಳದ ದಕ್ಷಿಣ 24 ಪರ್ಗಾನಾಸ್ ನಲ್ಲಿ ಶುಕ್ರವಾರ ನಡೆದಿದೆ.
ಸಾಧನಾ ಸಮತಾ (27) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕುಟುಂಬ ಸದಸ್ಯರಾದ ಸುಜಾತ ಸಮಂತಾ ಎಂಬುವವರು ಸೋಲು ಕಂಡ ಹಿನ್ನಲೆಯಲ್ಲಿ ಸಾಧನಾ ಅವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. '
ನಿನ್ನೆಯಷ್ಟೇ ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬಿದ್ದಿತ್ತು. ಫಲಿತಾಂಶ ಹೊರಬಿದ್ದ ಬಳಿಕ ಸಾಧನಾ ಅವರು ತೀವ್ರವಾಗಿ ನೊಂದಿದ್ದರು. ಬಳಿಕ ಕೆಲ ಗಂಟೆಗಳ ಕಾಲ ಕಣ್ಮರೆಯಾಗಿದ್ದರು. ನಂತರ ಸಾಧನಾಗಾಗಿ ಹುಡುಕಾಟ ನಡೆಸಿದಾಗ ಸಾಧನಾ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರೂ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಸಾಧನಾ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.