ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 
ದೇಶ

ಪ್ರಜಾಪ್ರಭುತ್ವ ನಂಬಿದವರು ಬಿಎಸ್'ವೈ ರಾಜೀನಾಮೆಯಿಂದ ಸಂತಸ ಪಡುತ್ತಾರೆ; ಸಿಎಂ ಚಂದ್ರಬಾಬು ನಾಯ್ಡು

ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರು ಬಿ.ಎಸ್.ಯಡಿಯೂರಪ್ಪ ಅವರ ರಾಜಿನಾಮೆಯಿಂದ ಸಂತಸ ಪಡುತ್ತಾರೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ...

ಅಮರಾವತಿ; ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರು ಬಿ.ಎಸ್.ಯಡಿಯೂರಪ್ಪ ಅವರ ರಾಜಿನಾಮೆಯಿಂದ ಸಂಸತ ಪಡುತ್ತಾರೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ. 
ವಿಶ್ವಾಸಮತಯಾಚನೆಗೂ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ನಾಯ್ಡು ಅವರು, ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆಂಬ ಸುದ್ದಿ ತಿಳಿಯಿತು. ನಿಮಗೆ ಸಂತಸವಾಯಿತೇ?... ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರಿಗೆ ಈ ಬೆಳವಣಿಗೆ ಸಂತಸವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಟಿಡಿಪಿ ಪಕ್ಷ ಸೇರಿ ಆಂಧ್ರಪ್ರದೇಶದಲ್ಲಿ ವ್ಯಾಪಕ ಪ್ರತಿಭಟನೆಗಳು ಆರಂಭವಾಗಿತ್ತು. ಆದರೆ, ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಮಾತ್ರ ಇದಾವುದಕ್ಕೂ ಬೆಲೆಯನ್ನೇ ನೀಡಲಿಲ್ಲ. ಈ ಹಿನ್ನಲೆಯಲ್ಲಿ ಬಿಜೆಪಿ ಮೇಲೆ ಟಿಡಿಪಿ ಕೆಂಡಾಮಂಡಲಗೊಂಡು ಮೈತ್ರಿಕೂಟದಿಂದ ಹೊರಬಂದಿತ್ತು. ಅಲ್ಲದೆ, ಬಿಜೆಪಿ ವಿರುದ್ಧ ಟಿಡಿಪಿ ತೊಡೆ ತಟ್ಟಿ ನಿಂತಿದೆ. ಇದರಂತೆ ರಾಜ್ಯದಲ್ಲಿರುವ ತೆಲುಗು ಜನತೆ ಬಿಜೆಪಿಗೆ ಮತ ಹಾಕದಂತೆ ಈ ಹಿಂದೆ ಚಂದ್ರಬಾಬು ನಾಯ್ಡು ಅವರು ಕರೆ ನೀಡಿದ್ದರು. 
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರದ ಬಲ ಮತ್ತಷ್ಟು ಹೆಚ್ಚಾಗಲಿತ್ತು. ಅಲ್ಲದೆ, ತನ್ನ ವಿರುದ್ಧ ಬಿಜೆಪಿ ಮತ್ತಷ್ಟು ಆಕ್ರಮಣಕಾರಿಯಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಬಿಜೆಪಿಗೆ ಸೋಲಾಗಲಿ ಎಂದು ಟಿಡಿಪಿ ಬಯಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ