ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದೇವೆ: ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವ ಮುನ್ನವೇ ಸಿಎಂ ಸ್ಥಾನಕ್ಕೆ....
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವ ಮುನ್ನವೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಹೊಸ ಸರ್ಕಾರ ರಚಿಸುವ ಉತ್ಸಾಹದಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ.
ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ. ನೀವು ಯಾವಾಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೀರಿ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಎಚ್ ಡಿಕೆ, ನಾನು ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದೇನೆ ಎಂದರು.
ಕುಮಾರಸ್ವಾಮಿ ಅವರು ಈಗಾಗಲೇ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ಯಡಿಯೂರಪ್ಪ ಅವರ ರಾಜಿನಾಮೆ ಅಂಗೀಕರಿಸಿದ ನಂತರ ಕುಮಾರಸ್ವಾಮಿ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುವ ಸಾಧ್ಯತೆ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.