ದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶ ಬಿಜೆಪಿ ಶಾಸಕನ ವಿರುದ್ಧ ಕೇಸ್ ದಾಖಲಿಸಿದ ಸಿಬಿಐ

Lingaraj Badiger
ನವದೆಹಲಿ: ಉತ್ತರ ಪ್ರದೇಶದ ಉನ್ನಾವೋ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರ ವಿರುದ್ಧ ಸಿಬಿಐ ಸೋಮವಾರ ಪ್ರಕರಣ ದಾಖಲಿಸಿದೆ.
17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದು, ಸದ್ಯ ಪೊಲೀಸರ ವಶದಲ್ಲಿರುವ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಅತ್ಯಾಚಾರ ಸಂತ್ರಸ್ತೆಯ ತಂದೆಯ ವಿರುದ್ಧ ಸುಳ್ಳ ಪ್ರಕರಣ ದಾಖಲಿಸಿದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ.
ಇತ್ತೀಚಿಗಷ್ಟೆ ಸಂತ್ರಸ್ತ ಬಾಲಕಿಯ ತಂದೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಬ್ಬರು ಸಬ್ ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿತ್ತು.
ಕ್ರಿಮಿನಲ್ ಪಿತೂರಿ ಹಾಗೂ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಉನ್ನಾವೋದ ಮಖಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗಳಾದ ಅಶೋಕ್ ಸಿಂಗ್ ಭದುರಿಯಾ ಹಾಗೂ ಕಾಮತ್ ಪ್ರಸಾದ್ ಸಿಂಗ್ ಅವರನ್ನು ಸಿಬಿಐ ಬಂಧಿಸಿದೆ.
2017, ಜೂನ್ 4ರಂದು ಕೆಲಸ ಕೇಳಿಕೊಂಡು ಶಾಸಕರ ಮನೆಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲಿ ಸಾಮೂಹಿತ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಸಿಬಿಐ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಶಾಸಕ ಸೆಂಗರ್ ಸದ್ಯ ಸೀತಾಪುರ್ ಜೈಲನಲ್ಲಿದ್ದಾರೆ.
SCROLL FOR NEXT