ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿತ್ತು. ಸೇನೆ ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇದಾದ ಬಳಿಕ ದಾಳಿ ನಿಲ್ಲಿಸಿ ಎಂದು ಬೇಡಿಕೊಂಡಿದ್ದ ಪಾಕ್ ಮತ್ತೆ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 6 ಮಂದಿ ಗಾಯಗೊಂಡಿದ್ದಾರೆ.
ಜಮ್ಮುವಿನ ಆರ್'ಎಸ್ ಪುರ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹಾಗೂ ಮಹಿಳೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.
ಇನ್ನು ಪಾಕ್ ಸೇನೆಯ ಗುಂಡಿನ ದಾಳಿ ಭಾರತೀಯ ಯೋಧರು ಸಹ ಪ್ರತ್ಯುತ್ತರವಾಗಿ ಗುಂಡಿನ ಮಳೆ ಸುರಿಸುತ್ತಿದ್ದಾರೆ.
ರಂಜಾನ್ ಪ್ರಯುಕ್ತ ಕದನ ವಿರಾಮ ಕಾಯ್ದುಕೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದ್ದನ್ನೇ ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ, ಗಡಿಯಲ್ಲಿ ಉದ್ಧಟತವನ್ನು ಪ್ರದರ್ಶಿಸಿತ್ತು. ಪಾಕಿಸ್ತಾನ ಈ ಉದ್ಧಟತನಕ್ಕೆ ದಿಟ್ಟ ಉತ್ತರ ನೀಡಿದ್ದ ಗಡಿ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಗಡಿಯಲ್ಲಿದ್ದ ಪಾಕಿಸ್ತಾನ ಸೇನಾ ಬಂಕರ್ ಗಳನ್ನು ಧ್ವಂಸಗೊಳಿಸಿತ್ತು.