ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ- ಅಮಿತ್ ಶಾ
ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ : ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಪೆಟ್ರೋಲ್ ದರ ಇಳಿಕೆ ಮಾಡಲು ಸೂತ್ರವೊಂದನ್ನು ತಯಾರಿಸುತ್ತಿದ್ದೇವೆ. ಪೆಟ್ರೋಲ್ ಸಚಿವ ಧರ್ಮೇಂದ್ರ ಪ್ರಧಾನ್ ನಾಳೆ ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ದೇಶಾದ್ಯಂತ ಇಂದಿನಿಂದ ಗಣನೀಯ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ಬೆಳಿಗ್ಗೆಯಿಂದ ಜಾರಿಯಾಗುವಂತೆ ದೆಹಲಿಯಲ್ಲಿ ಪೆಟ್ರೋಲ್ ದರ 76. 87 ರೂ. ಕೋಲ್ಕತ್ತಾದಲ್ಲಿ 79.53, ಮುಂಬೈಯಲ್ಲಿ 84.7 ಹಾಗೂ ಚೆನ್ನೈಯಲ್ಲಿ 79. 79 ರೂ ಆಗಿದೆ.
ಭಾರತೀಯ ತೈಲ ನಿಗಮದ ಪ್ರಕಾರ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 68. 08 ರೂ ಆಗಿದೆ. ಕೋಲ್ಕತ್ತಾದಲ್ಲಿ 70.63, ಮುಂಬೈಯಲ್ಲಿ 72.48 ಹಾಗೂ ಚೆನ್ನೈಯಲ್ಲಿ 71. 87 ರೂ ಆಗಿದೆ.
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಜನಸಾಮಾನ್ಯರು ಹೈರಾಣು ಆಗುವಂತಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.