ಹಿಲ್ಟನ್ ಹೊಟೆಲ್ ನಲ್ಲಿ ಆನಂದ್ ಸಿಂಗ್ ಭೇಟಿ ಮಾಡಿದ ಡಿಕೆ ಶಿವಕುಮಾರ್ 
ದೇಶ

'ಮತ್ತೆ ಬಿಜೆಪಿಗೆ ಹೋಗಬೇಡಿ': ಸಚಿವ ಆನಂದ್ ಸಿಂಗ್ ಗೆ ಡಿಕೆಶಿ ಮನವಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಇನ್ನು ಕೆಲವೇ ಗಂಟೆಗಳು ಬಾಕಿ ಇದೆಯಾದರೂ, ಕಾಂಗ್ರೆಸ್ ಪಾಳಯದಲ್ಲಿ ಮಾತ್ರ ಇನ್ನೂ ಆಪರೇಷನ್ ಕಮಲ ಭೀತಿ ಇನ್ನೂ ಕಡಿಮೆಯಾಗಿಲ್ಲ.

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಇನ್ನು ಕೆಲವೇ ಗಂಟೆಗಳು ಬಾಕಿ ಇದೆಯಾದರೂ, ಕಾಂಗ್ರೆಸ್ ಪಾಳಯದಲ್ಲಿ ಮಾತ್ರ ಇನ್ನೂ ಆಪರೇಷನ್ ಕಮಲ ಭೀತಿ ಇನ್ನೂ ಕಡಿಮೆಯಾಗಿಲ್ಲ.
ಇದಕ್ಕೆ ಇಂಬು ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಡಿಕೆ ಶಿವಕುಮಾರ್ ಅವರು ಇಂದು ಮತ್ತೆ ಸಚಿವ ಆನಂದ್ ಸಿಂಗ್ ರನ್ನು ಭೇಟಿ ಮಾಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಯತ್ತ ಮುಖ ಮಾಡದಂತೆ ಕಿವಿಮಾತು ಹೇಳಿದ್ದಾರೆ.
ಇಂದು ಬೆಳಗ್ಗೆಯೇ ವಿಜಯನಗರದ ಶಾಸಕ ಆನಂದ್ ಸಿಂಗ್ ಉಳಿದುಕೊಂಡಿರುವ ಬೆಂಗಳೂರಿನ ದೊಮ್ಮಲೂರಿನ ಹಿಲ್ಟನ್ ಹೊಟೆಲ್ ಗೆ ತೆರಳಿದ ಡಿಕೆಶಿವಕುಮಾರ್ ಅವರು ಆನಂದ್ ಸಿಂಗ್ ರನ್ನು ಭೇಟಿ ಮಾಡಿ ಸುಮಾರು ಹೊತ್ತು ಚರ್ಚೆ ನಡೆಸಿದರು. ಈ ವೇಳೆ ಆನಂದ್ ಸಿಂಗ್ ರನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿವಕುಮಾರ್, ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿಯತ್ತ ಮುಖ ಮಾಡಬೇಡ. ನೀವು ಹಿರಿಯ ಶಾಸಕ ಎಂದು ಪಕ್ಷಕ್ಕೆ ತಿಳಿದಿದೆ. ಪಕ್ಷದಲ್ಲಿ ಖಂಡಿತಾ ನಿನಗೆ ಸ್ಥಾನಮಾನ ದೊರೆಯುತ್ತದೆ. ಯಾವುದೇ ಆಮಿಷ ಮತ್ತು ಬೆದರಿಕೆಗಳಿಗೆ ಹೆದರಬೇಡ. ನಿನ್ನೊಂದಿಗೆ ನಾವಿದ್ದೇವೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ನಾಳೆ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ನಾಡಿದ್ದು ಅಂದರೆ ಗುರುವಾರ ವಿಧಾನಸಭೆ ಅಧಿವೇಶನ ಕರೆದು ವಿಶ್ವಾಸಮತ ಯಾಚನೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮತ್ತೆ ಶಾಸಕರು ಕೈಕೊಡುವ ಶಂಕೆ ಮೇರೆಗೆ ಶಾಸಕರ ಮೇಲೆ ಹದ್ದಿನಕಣ್ಣು ಇಡಲಾಗಿದೆ. ಪ್ರಮುಖವಾಗಿ ಮಿಸ್ಸಿಂಗ್ ಶಾಸಕರಾದ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಪಾಟೀಲ್ ರ ಮೇಲೆ ನಿಗಾ ಇರಿಸಲಾಗಿದೆ.
ಇನ್ನು ಈ ಹಿಂದೆ ನಡೆದ ವಿಶ್ವಾಸಮತ ಯಾಚನೆ ವೇಳೆ ಶಾಸಕ ಆನಂದ್ ಸಿಂಗ್ ಮತ್ತು ಶಾಸಕ ಪ್ರತಾಪ್ ಗೌಡ ಪಾಟೀಲ್ ನಾಪತ್ತೆಯಾಗಿ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದ್ದರು. ಬಳಿಕ ಡಿಕೆ ಸಹೋದರರು ನಡೆಸಿದ ಕಾರ್ಯಾಚರಣೆ ಫಲವಾಗಿ ಅವರು ವಿಧಾನಸಭೆಗೆ ಆಗಮಿಸಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಇಬ್ಬರೂ ನಾಯಕರಿಗೆ ಪಕ್ಷದ ವಿಪ್ ಜಾರಿ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್