ದೇಶ

ಜಮ್ಮು-ಕಾಶ್ಮೀರ; ಅನಂತ್'ನಾಗ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ, 6 ನಾಗರೀಕರಿಗೆ ಗಾಯ

Manjula VN
ಅನಂತ್'ನಾಗ್; ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ 6 ನಾಗರೀಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 
ಅನಂತ್ ನಾಗ್ ಜಿಲ್ಲೆಯ ಬಿಜ್ಬೆಹರ ಎಂಬ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 
ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡ ನಾಗರೀಕರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಉಗ್ರರಿಗಾಗಿ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ. 
SCROLL FOR NEXT