ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಈ ಸಮಾರಂಭಕ್ಕೆ ಪ್ರಾದೇಶಿಕ ಪಕ್ಷಗಳ ನಾಯಕರು, ಒಂದಾಗಿ ಶಕ್ತಿ ಪ್ರದರ್ಶಿಸಿವೆ.
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಟಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಣೆಸಲು ಒಂದಾಗಿದ್ದು ತಮ್ಮ ಬಲ ಪ್ರದರ್ಶನಕ್ಕೆ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸಮಾರಂಭ ಇದಕ್ಕೆ ಸಾಕ್ಷಿಯಾಯಿತು.
ಸಮಾರಂಭಕ್ಕೆ ಪ್ರಮಾಣವಚನ ಸ್ವೀಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್ಪಿಯ ಮಾಯಾವತಿ, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಇನ್ನಿತರೆ ಗಣ್ಯಾತಿ ಗಣ್ಯರು ಭಾಗವಹಿಸಿದ್ದು ನಂತರ ವೇದಿಕೆ ಮೇಲೆ ತಾವೆಲ್ಲ ಒಟ್ಟಾಗಿರುವುದಾಗಿ ಬಲ ಪ್ರದರ್ಶನ ಮಾಡಿವೆ.
ಇನ್ನು ಬಿಜೆಪಿ ವಿರುದ್ಧ ಪ್ರಾದೇಶಿಕ ಪಕ್ಷಗಳೆಲ್ಲಾ ಒಟ್ಟಾಗಿ ಸಂಯುಕ್ತ ರಂಗ ರಚನೆಗೆ ಮುಂದಾಗಿವೆ. ಇದರಲ್ಲಿ ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು, ಕೆಸಿ ಚಂದ್ರಶೇಕರ್ ರಾವ್, ಅಖಿಲೇಶ್ ಯಾದವ್, ಮಾಯಾವತಿ ಇವರೆಲ್ಲಾ ಮುಂಚೂಣಿ ನಾಯಕರಾಗಿದ್ದಾರೆ.