ಅಹಮದಾಬಾದ್: ಹಿರಿಯ ಮಗಳನ್ನು ಉನ್ನತ ವ್ಯಾಸಂಗಕ್ಕಾಗಿ ಆಸ್ಟ್ರೇಲಿಯಾಕ್ಕೆ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಗಲಾಟೆ ನಡೆದ ನಂತರ ಗುಜರಾತಿನ ಉದ್ಯಮಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಧರ್ಮೇಶ್ ಶಾ, ಹತ್ಯೆ ಮಾಡಿದ್ದ ಆರೋಪಿ. 50 ವರ್ಷದ ಈತ ಕಟ್ಟಡ ನಿರ್ಮಾಣ ವ್ಯವಹಾರ ಮಾಡುತ್ತಿದ್ದು, ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಗರದ ಮಾರುಕಟ್ಟೆ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಹಿರಿಯ ಮಗಳನ್ನು ಉನ್ನತ ವ್ಯಾಸಂಗಕ್ಕಾಗಿ ಆಸ್ಟ್ರೇಲಿಯಾಕ್ಕೆ ಕಳುಹಿಸಲು 70 ಲಕ್ಷ ರೂಪಾಯಿ ವೆಚ್ಚವಾಗುತ್ತಿತ್ತು,. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಮನೆಯಲ್ಲಿ ಅವಾಚ್ಯ ಶಬ್ದಗಳಿಂದ ತನ್ನನ್ನು ನಿಂದಿಸಲಾಯಿತು ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.