ಪಿಎನ್ ಬಿ ವಂಚನೆ ಪ್ರಕರಣ ; ಜಾರಿ ನಿರ್ದೇಶನಾಲಯದಿಂದ ಮೊದಲ ಚಾರ್ಜ್ ಶೀಟ್ ದಾಖಲು
ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ಆಭರಣ ಉದ್ಯಮಿ ನೀರವ್ ಮೋದಿ 14 ಸಾವಿರ ಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮೊದಲ ಚಾರ್ಜ್ ಶೀಟ್ ನ್ನು ದಾಖಲಿಸಿದೆ.
ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ಆಭರಣ ಉದ್ಯಮಿ ನೀರವ್ ಮೋದಿ 14 ಸಾವಿರ ಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮೊದಲ ಚಾರ್ಜ್ ಶೀಟ್ ನ್ನು ದಾಖಲಿಸಿದೆ.
ಸಾಲ ಮರುಪಾವತಿಸದೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ನೀರವ್ ಮೋದಿಯ ಸುಮಾರು 171 ಕೋಟಿ ರೂ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಸೋಮವಾರ ಮುಟ್ಟುಗೋಲು ಹಾಕಿಕೊಂಡಿತ್ತು.
ಕಳೆದ ವಾರ ನೀರವ್ ಮೋದಿ ಸಂಬಂಧಿ, ಉದ್ಯಮಿ ಮೆಹೂಲ್ ಚೋಕ್ಸಿಗೆ ಸೇರಿದ ಗೀತಾಂಜಲಿ ಸಮೂಹ ಕಂಪನಿಯಿಂದ 85 ಕೋಟಿ ರೂಪಾಯಿ ಮೌಲ್ಯದ 34 ಸಾವಿರ ಚಿನ್ನಾಭರಣ ತುಣುಕುಗಳನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿತ್ತು.
ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ನೀರವ್ ಮೋದಿಯ ಒಟ್ಟಾರೇ ಆಸ್ತಿಯ ಪ್ರಸ್ತುತ ಮಾರುಕಟ್ಟೆ ದರ 7. 800 ಕೋಟಿ ರೂಪಾಯಿಗೂ ಹೆಚ್ಚಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಸಿಬಿಐ ಮತ್ತಿತರ ಸಂಸ್ಥೆಗಳಿಂದಲೂ ತನಿಖೆ ನಡೆಯುತ್ತಿದೆ. ಈ ತಿಂಗಳ ಆರಂಭದಲ್ಲಿಯೇ ಸಿಬಿಐ ಎರಡು ಜಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.