ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ ಪೊಲೀಸರು ಸ್ಮಾರ್ಟ್ ಫೋನ್ ಬಳಕೆ ಮಾಡುವಂತಿಲ್ಲ.. ಯಾಕೆ ಗೊತ್ತಾ?

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ದಿನೇ ದಿನೇ ಶಸ್ತ್ರಾಸ್ತ್ರ ಕಳವು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಶ್ಮೀರ ಪೊಲೀಸ್ ಇಲಾಖೆ ತನ್ನ ಸಿಬ್ಬಂದಿಗಳ ಸ್ಮಾರ್ಟ್ ಫೋನ್ ಬಳಕೆಗೆ ನಿಷೇಧ ಹೇರಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 24 May 2018, 1:55 am
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ದಿನೇ ದಿನೇ ಶಸ್ತ್ರಾಸ್ತ್ರ ಕಳವು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಶ್ಮೀರ ಪೊಲೀಸ್ ಇಲಾಖೆ ತನ್ನ ಸಿಬ್ಬಂದಿಗಳ ಸ್ಮಾರ್ಟ್ ಫೋನ್ ಬಳಕೆಗೆ ನಿಷೇಧ ಹೇರಿದೆ.
ಅರೆ ಇದೇನಿದು ಶಸ್ತ್ರಾಸ್ತ್ರ ಕಳವಿಗೂ ಸಿಬ್ಬಂದಿಗಳ ಸ್ಮಾರ್ಟ್ ಫೋನ್ ಬಳಕೆಗೂ ಏನು ಸಂಬಂಧ ಎಂಬುದು ನಿಮ್ಮ ಪ್ರಶ್ನೆಯಾದರೆ... ಭದ್ರತಾ ಸಿಬ್ಬಂದಿಗಳು ಕರ್ತವ್ಯದ ವೇಳೆ ಹೆಚ್ಚಾಗಿ ಸ್ಮಾರ್ಟ್ ಫೋನ್ ನಲ್ಲಿ ತಲ್ಲೀನರಾಗಿರುವುದರಿಂದ ಕಳ್ಳರು ಮತ್ತು ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯಲು ನೆರವಾಗುತ್ತದೆ ಎಂಬ ಕಾರಣಕ್ಕೆ ಇಲಾಖೆ ಕರ್ತವ್ಯದ ವೇಳೆ ಸ್ಮಾರ್ಟ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಈ ಬಗ್ಗೆ ಕಾಶ್ಮೀರ ಪೊಲೀಸ್ ಎಡಿಜಿಪಿ ಎಕೆ ಚೌದರಿ ಅವರು ಪ್ರಕಟಣೆ ಹೊರಡಿಸಿದ್ದು, ಕೆಳಹಂತದ ಭದ್ರತಾ ಸಿಬ್ಬಂದಿಗಳು ಮಾತ್ರವಲ್ಲದೇ ಅಧಿಕಾರಿಗಳ ಮತ್ತು ವಿಐಪಿಗಳ ವೈಯಕ್ತಿಕ ಭದ್ರತಾ ಸಿಬ್ಬಂದಿಗಳೂ ಕೂಡ ಕರ್ತವ್ಯದ ವೇಳೆ ಸ್ಮಾರ್ಟ್ ಫೋನ್ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಿದ್ದಾರೆ.
ಪ್ರಕಟಣೆಯಲ್ಲಿ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗ ಸ್ಮಾರ್ಟ್ ಫೋನ್ ಬಳಕೆ ಹೆಚ್ಚಾಗಿದೆ. ಇಂತಹ ಸಮಯವನ್ನೇ ದುರುಪಯೋಗ ಪಡಿಸಿಕೊಳ್ಳುವ ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳನ್ನು ಕಸಿದು ಪರಾಯಾಗುತ್ತಾರೆ. ಕರ್ತವ್ಯದ ವೇಳೆ ಸ್ಮಾರ್ಟ್ ಫೋನ್ ಬಳಕೆ ಮಾಡುವ ಮೂಲಕ ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳುವ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಈ ಆದೇಶ ನೀಡಲಾಗಿದೆ ಎಂದು ಹೇಳಿದರು.

Advertisement

Advertisement

ಅಂತೆಯೇ ಯಾವುದೇ ಭದ್ರತಾ ಅಧಿಕಾರಿಯೂ ಕರ್ತವ್ಯದ ವೇಳೆ ಸ್ಮಾರ್ಟ್ ಪೋನ್ ಬಳಕೆಯಷ್ಟೇ ಅಲ್ಲ, ಅವುಗಳನ್ನು ಹೊತ್ತೊಯ್ಯಬಾರದು. ಎಲ್ಲ ಗಾರ್ಡ್ ಗಳು ಕಡ್ಡಾಯವಾಗಿ ಬುಲೆಟ್ ಪ್ರೂಫ್ ಗೇರ್ ಮತ್ತು ತಮ್ಮ ಶಸ್ತ್ರಾಸ್ತ್ರಗಳನ್ನು ತಪ್ಪದೇ ಹೊತ್ತೊಯ್ಯಬೇಕು. ಅಲ್ಲದೆ ಸಮವಸ್ತ್ರ ಕೂಡ ಸರಿಯಾಗಿರಬೇಕು ಎಂದು ಆದೇಶಿಸಿರುವುದಾಗಿ ಎಕೆ ಚೌದರಿ ಸ್ಪಷ್ಟಪಡಿಸಿದ್ದಾರೆ. ಸೈನಿಕರ ಮತ್ತು ಭದ್ರತಾ ಸಿಬ್ಬಂದಿಗಳ ಸಮವಸ್ತ್ರ, ಶಸ್ತ್ರಾಸ್ತ್ರ ಇತ್ಯಾದಿಗಳ ಬಗ್ಗೆ ಆಯಾ ಪ್ರಾಂತೀಯ ಅಧಿಕಾರಿಗಳು ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದೂ ಆದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement