ಕಮಲ್ ನಾಥ್ 
ದೇಶ

ಮಧ್ಯಪ್ರದೇಶ ಚುನಾವಣೆ: ಬಿಜೆಪಿಗೆ ಸೆಡ್ಡು ಹೊಡೆಯಲು ಎಸ್ ಪಿ ಜೊತೆ ಕಾಂಗ್ರೆಸ್ ಮೈತ್ರಿ ?

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಭೂಪಾಲ್ : ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್, ಈ ಹಿಂದೆ ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಸಮಾಜವಾದಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಅದೇ ರೀತಿ ಮಧ್ಯ ಪ್ರದೇಶ ಚುನಾವಣೆಯಲೂ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಎಸ್ ಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದನ್ನು ಅವರು ನೆನಪಿಸಿಕೊಂಡರು. ಆದಾಗ್ಯೂ ಬಿಜೆಪಿ 325 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದುಕೊಂಡಿತ್ತು.

2014 ರ ಚುನಾವಣೆಯಲ್ಲಿ ಬಿಜೆಪಿ ಶೇ. 31 ರಷ್ಟು ಮತಗಳನ್ನು ಪಡೆದುಕೊಂಡಿದ್ದರೆ, ಶೇ 69 ಮತಗಳು ಅವರ ವಿರುದ್ಧ ಚಲಾವಣೆ ಆಗಿದ್ದವು.  ಜಾತ್ಯತೀತ ಮತಗಳು ವಿಭಜನೆಯಾಗಬಾರದು ಎಂಬ ಉದ್ದೇಶದಿಂದ ಮೈತ್ರಿ ಅನಿವಾರ್ಯವಾಗಿದ್ದು, ಶೀಘ್ರದಲ್ಲಿಯೇ ಇತರ ಪಕ್ಷಗಳೊಂದಿಗೂ ಮಾತುಕತೆ ನಡೆಸುವುದಾಗಿ ಕಮಲ್ ನಾಥ್ ತಿಳಿಸಿದರು.

 ಮಧ್ಯಪ್ರದೇಶ ಚುನಾವಣೆಯಲ್ಲೂ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು  ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್  ವಿಶ್ವಾಸ ವ್ಯಕ್ತಪಡಿಸಿದರು.

ಮಧ್ಯಪ್ರದೇಶದಲ್ಲಿ 2003 ರಿಂದಲೂ ಬಿಜೆಪಿ ಅಧಿಕಾರದಲ್ಲಿದೆ. ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಲ್ಲಿ ಆಡಳಿತ ವಿರೋಧಿ ಅಲೆ ಕಂಡುಬಂದಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್  ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.

ಮಧ್ಯಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳಿಗೆ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ  ತಲಾ 19 ಸ್ಥಾನಗಳಲ್ಲಿ ಜಯ ಗಳಿಸಿದ್ದವು.  ಉಭಯ ಪಕ್ಷಗಳು ಶೇ.46 ರಷ್ಟು  ಸಮಾನವಾದ ಮತಗಳನ್ನು ಗಳಿಸಿಕೊಂಡಿದ್ದವು.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!